ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್
ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್ ಸಂಚಾರದ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇರಲಿಲ್ಲ. ಈ ನಡುವೆ ಜನವಶ್ಯಕವಾದ ಬಸ್’ಗಳು ಸಂಚಾರ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್
ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಪರಾರಿ ಶಾಂತಿನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಅವರು ಯುವಕರ ತಂಡದಿಂದ ಹಲ್ಲೆಗೊಳಗಾಗಿ ಮೃತಪಟ್ಟವರು. ಜಾರಪ್ಪ ನಾಯ್ಕ್ ಅವರ
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ
ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ
ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” . ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್
ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು























