ಪುತ್ತೂರು: ಬಲ್ನಾಡು ಕರ್ಕುಂಜ ನಿವಾಸಿ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ರಾಮಕೃಷ್ಣ ಅವರು ಮನೆಯಲ್ಲಿದ್ದ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ನ.25 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಡ ರಾತ್ರಿ ಪುತ್ತೂರು
ಪುತ್ತೂರು ನಗರದ ಮಧ್ಯಭಾಗದಲ್ಲಿ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಬೋರ್ಡ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಪುತ್ತೂರು ಮಹಿಳಾ ಪೋಲೀಸ್ ಠಾಣೆ ಬಳಿಯಿರುವ ಫಡರಲ್ ಬ್ಯಾಂಕ್ ಗೆ ಸಂಬಂಧಪಟ್ಟ ಎಟಿಎಂ ಕೇಂದ್ರದ ಬೋರ್ಡ್ ಇದಾಗಿದ್ದು, ಎಟಿಎಂ ಗೆ ಬರುವ ಗ್ರಾಹಕರು ಪಾರ್ಕಿಂಗ್ ನಡೆಸುವ ಜಾಗದಲ್ಲೇ ಈ ಬೋರ್ಡ್ ಹಾಕಲಾಗಿತ್ತು. ಇದು ವಾಹನ ಸವಾರರಿಗೆ ತಕ್ಷಣಕ್ಕೆ ಗೋಚರವಾಗದೇ ಇದ್ದ ಕಾರಣ ಹಲವು ದ್ವಿಚಕ್ರ ವಾಹನ ಸವಾರರ ತಲೆಗೆ ಈ ಬೋರ್ಡ್ ನಿಂದಾಗಿ ಗಂಭೀರ ಗಾಯಗಳಾಗಿದ್ದರು.
ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ. ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಪುತ್ತೂರು ಮಹಮ್ಮಾಯಿ ದೇವಳದ ಬಳಿಯಲ್ಲಿರುವ ಸಂಘಟನಾ ಕಚೇರಿಯಲ್ಲಿ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇವರಿಬ್ಬರೂ
ಹಣ, ಅಧಿಕಾರ ಇದ್ದಲ್ಲಿ ಯಾವ ಕಾನೂನುಬಾಹಿರ ಕೃತ್ಯ ಮಾಡಿದರೂ ತಡೆಯುವವರು ಇಲ್ಲ ಎನ್ನುವ ಮನೋಭಾವ ಕೆಲವರಲ್ಲಿದೆ. ಈ ಮನೋಭಾವಕ್ಕೆ ತಕ್ಕಂತೆ ಇಂಥಹ ಕಾನೂನುಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕುವ ಅಧಿಕಾರಿ ವರ್ಗವೂ ಸುಮ್ಮನಿದ್ದರೆ, ಇಂಥವರ ದಬ್ಬಾಳಿಕೆಯೂ ಹೆಚ್ಚಾಗುತ್ತದೆ. ಇಂಥಹುದೇ ಒಂದು ಪ್ರಕರಣ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲೂ ನಡೆದಿದ್ದು, ರಸ್ತೆ ಪಕ್ಕದಲ್ಲಿರುವ ಸರಕಾರಿ ಜಾಗಕ್ಕೆ ಕೆಲವು ವ್ಯಕ್ತಿಗಳು ಬೇಲಿ ಹಾಕುವ ಮೂಲಕ ರಾಜಾರೋಷವಾಗಿ ಅತಿಕ್ರಮಣ
ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಮನೆ ಕಡೆಗೆಂದು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್ ಅಪತ್ ಬಾಂಧವ ಟ್ರಸ್ಟ್ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಕೌಡಿಚ್ಚಾರ್ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ ಕುಟುಂಬವೂ ವಾಸಿಸುತಿದೆ. ಸಂತ್ರಸ್ತೆಗೆ ಆರೋಪಿಯ ಪರಿಚಯವೂ 2019 ರಲ್ಲಿ ಆಗಿತ್ತು ಎಂದು
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ
ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ
ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿ ಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ.ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಇವರು ಮೂಲತ: ಸವಣೂರು ಪುಣ್ಚಪ್ಪಾಡಿ ನಿವಾಸಿಯಾಗಿದ್ದು ಸದ್ಯ ಪೆರಮೊಗರಿನಲ್ಲಿ ವಾಸವಾಗಿದ್ದರು . ಇವರಿಗೆ ಪುಣ್ಚಪ್ಪಾಡಿಯಲ್ಲಿ ತೋಟವಿದ್ದು ಅಲ್ಲಿ ಕೆಲಸ ಮಾಡಿಸಿ ವಾಪಸ್ಸು ಪೆರಮೊಗರುವಿಗೆ

















