Home Posts tagged #puttur (Page 57)

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ

ಪುತ್ತೂರಿನಲ್ಲಿ ಆಂಬುಲೆನ್ಸ್ ಲೋಕಾರ್ಪಣೆ

ಬಜರಂಗದಳ ಪುತ್ತೂರು ಪ್ರಖಂಡ ಮಾಜಿ ಸಂಚಾಲಕರಾಗಿದ್ಧ ದಿ.ನಿತಿನ್ ನಿಡ್ಪಳ್ಳಿ ಇವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕೆಯ್ಯೂರು ವತಿಯಿಂದ ಅಂಬುಲೆನ್ಸ್ ಲೊಕಾರ್ಪಣೆ ಇಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು, ಬಜರಂಗದಳ ಪ್ರಾಂತ ಸಹ ಸಂಯೋಜಕ್

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ ಸಹೋದರಿಯರ ಮಕ್ಕಳಾದ ಸುದೇಶ್, ಧನುಷ್ ಹಾಗೂ ಅರ್ಚನಾ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ

ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,

ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಅವರಿಗೆ ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿ

ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ಪುತ್ತೂರಿನಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ

ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ