Home Posts tagged #puttur (Page 7)

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ  ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಇವರು ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಇವರು ಪ್ರಸ್ತುತ ಮಂಗಳೂರಿನ

ಬ್ಯಾಂಕ್‌ನ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ

ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕಲ್ಪುರೆ, ಸಾಲಗಾರ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ

ಪುತ್ತೂರು : ‘ಇಲ್ಲಗೊಂಜಿ ಗೇನೊದ ಬಂಡಾರ’ – ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಚಾಲನೆ

ಕರ್ನಾಟ‌ಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ‌ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ‌ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ

ಪುತ್ತೂರು: ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಪುತ್ತೂರು ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು.ರಂಗ

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಶಾಲೆ ದ್ವಿತೀಯ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ

ಬೈಂದೂರು : ಸದನದಲ್ಲಿ ಕಾರ್ಮಿಕರ ಪರ ಧ್ವನಿ ಎತ್ತಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರು ತಿಳಿಸಿದ್ದಾರೆ.ಉಡುಪಿ‌ ಜಿಲ್ಲೆ ಸಹಿತ ಬೈಂದೂರು ವಿಧಾನಸಭಾ ಕ್ಷೇತ್ರ

ಬೆಳ್ಳಾರೆ: ಜೇಸಿಐ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಸಮುದಾಯ ಅಭಿವೃದ್ಧಿಯ ಗುರಿಯೊಂದಿಗೆ ಯುವಕರಲ್ಲಿ ನಾಯಕತ್ವ ಗುಣ ತುಂಬಿಸಿ ಜೇಸಿ ಸಂಸ್ಥೆಯು ಸಮಾಜಮುಖಿ ಚಿಂತನೆ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷ ಚಂದ್ರಹಾಸ ರೈ ಹೇಳಿದರು.ಅವರು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಬೆಳ್ಳಾರೆ ಜೇಸಿಐ ಘಟಕದ 2025ನೇ

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ

ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ

 ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ   ನಡೆಯಿತು.  ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರು ಅಧ್ಯಕ್ಷತೆ