Home Posts tagged #putturu (Page 3)

ಪುತ್ತೂರು: ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈ

ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದು, ಎಲ್ಲವನ್ನೂ

ಪುತ್ತೂರು|| ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ: ಬಿಜೆಪಿಯಿಂದ ಪ್ರತಿಭಟನೆ

ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪ- ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್

ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ಯಾಂಪಸ್‍ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪುತ್ತೂರು

ಉಪ್ಪಿನಂಗಡಿ : ಶಿರಾಡಿ ರಕ್ಷಿತಾರಣ್ಯದಲ್ಲಿ ಮರಗಳ ಮಾರಣ ಹೋಮ..!!!

ನೆಲ್ಯಾಡಿ: ಪಶ್ಚಿಮ ಘಟ್ಟದ ತಪ್ಪಲುನಲ್ಲಿರುವ ಉಪ್ಪಿನಂಗಡಿ ವಲಯ ವ್ಯಾಪ್ತಿಯಲ್ಲಿ ಬರುವ ಶಿರಾಡಿ, ಶಿಬಾಜೆ ಮೊದಲಾದ ಪ್ರದೇಶದಲ್ಲಿರುವ ರಕ್ಷಿತಾರಣ್ಯದಲ್ಲಿ ರಾಜಾರೋಷವಾಗಿ ಅರಣ್ಯ ಸಂಪತ್ತು ಕಳ್ಳರ ಪಾಲಾಗುತ್ತಿದ್ದು, ಉತ್ತಮ ಜಾತಿಯ ಬೃಹತ್ ಮರಗಳ ಮಾರಣ ಹೋಮ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿದೆ. ಶಿರಾಡಿ ರಕ್ಷಿತಾರಣ್ಯದ ಶಿಬಾಜೆ ಸೆಕ್ಷನ್ ವ್ಯಾಪ್ತಿಯಲ್ಲಿರುವ ನೀರಾನದಿಂದ ಕುರುಂಬು, ಅರಂಪಾದೆ ಭೂತಮಜಲುನಿಂದ ಮೇಲಿನ ಕುರುಂಜ ತನಕ, ಪೆರ್ಲದ

ಪುತ್ತೂರು: ಯುವಕನಿಂದ ಯುವತಿಯ ಕೊಲೆ-ಆರೋಪಿ ಪದ್ಮರಾಜ್ ಬಂಧನ

ಪುತ್ತೂರು: ಯುವಕನೊರ್ವ ಯುವತಿಯ ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕುದ್ದುಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂಬಾಕೆ ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದು ತಕ್ಷಣ ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿ

ಪುತ್ತೂರು || ಕುದ್ದುಪದವು ಯುವಕನಿಂದ ಚೂರಿ ಇರಿತ-ಯುವತಿ ಗಂಭೀರ

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಚೂರಿ ಇರಿತಗೊಂಡ ಯುವತಿ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು

ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು, ಉಪಾಧ್ಯಕ್ಷರಾಗಿ ವನಿತಾ ಎಂ.ಆಯ್ಕೆ

ನೆಲ್ಯಾಡಿ: ಕೌಕ್ರಾಡಿ ಗ್ರಾ.ಪಂ.ನ 2ನೇ ಅವಧಿಗೆ ಅಧ್ಯಕ್ಷರಾಗಿ ಲೋಕೇಶ್ ಬಾಣಜಾಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವನಿತಾ ಎಂ.ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದಾರೆ.

ಚಂದ್ರಯಾನ 3ರ ಯಶಸ್ವಿಗಾಗಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ಪ್ರಾರ್ಥನೆ

ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ. ಗೋಪಾಲಕೃಷ್ಣ ಭಟ್, ಸಚಿನ್ ಶೆಣೈ, ಡಾ. ಮುರಳೀಕೃಷ್ಣ ರೈ, ಮಹೇಶ ನಿಟಿಲಾಪುರ, ಆಶೋಕ ಕುಂಬ್ಲೆ, ಶ್ರೀಧರ

ಪುತ್ತೂರು: ಲೈವ್ ವೀಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನ

ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ

ಪುತ್ತೂರು: ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನಕ್ಕೆ ಖಂಡನೆ

ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ಹರೀಶ್ ಶಕ್ತಿನಗರ ಅವರು ಮಾತನಾಡಿ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್