ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಅವರು ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ನೀಡಿದರು. ಇಂದು ಬೆಳಗ್ಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಅವರನ್ನು ಅಭಿನಂದಿಸಲಾಯಿತು.
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.