Home Posts tagged #reporter

ಸುಳ್ಯ: ಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ

ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,

ಮಂಗಳೂರು: ಶಿರೂರು ದುರಂತ – ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ

ಉಡುಪಿ: ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ