ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ
ಬಸ್ ಡಿಪೋ ಸಿಬ್ಬಂದಿಗಳಿಗೆ ಬೈಯ್ಯುವ ಬರದಲ್ಲಿ ಜಾತಿ ನಿಂದನೆ ಮಾಡಿರುವ ಕೆ.ಎಸ್.ಆರ್.ಟಿ.ಸಿ ಪ್ರಭಾರಿ ವ್ಯವಸ್ಥಾಪಕ. ಜಗನ್ನಾಥ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸವಿತಾ ಸಮಾಜದ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಕಲೇಶಪುರದ ಡಿಪೋ ಎದುರು ಮೂಟೆಯಲ್ಲಿ ಕೇಶ ತುಂಬಿಸಿಟ್ಟು ಸವಿತಾ ಸಮಾಜದವರು ಪ್ರತಿಭಟನೆ ನಡೆಸಿದರು. ನಮ್ಮ ಸಮುದಾಯದ ಭಾವನೆಗೆ ಧಕ್ಕೆ ತಂದಿರುವ ತಪ್ಪಿತಸ್ಥ ಅಧಿಕಾರಿಯಾದ ಡಿಪೋ ಪ್ರಭಾರಿ ವ್ಯವಸ್ಥಾಪಕ
ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆ ಹಾಲೇಬೇಲೂರು ಅಂಡರ್ ಪಾಸ್ ಸಮೀಪ ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಗೌರಿಕೆರೆಯನ್ನು ಅಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ವೆ ನಂ 64ರಲ್ಲಿ ಸುಮಾರು 1ಎಕರೆ 33ಗುಂಟೆ ಸರಕಾರಿ
ಮಧ್ಯಾಹ್ನದ ಊಟ ಸವಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಈ ಪ್ರಕರಣ ಜರುಗಿದೆ ಅಸ್ವಸ್ಥಗೊಂಡಂತಹ ಸುಮಾರು 35 ಮಂದಿಯನ್ನು ಸದ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗರ ಒಳ್ಳೆಯ ಕ್ಯಾಂಪ್‍ನಲ್ಲಿರುವ ವಾಹನ ಚಾಲನಾ ತರಬೇತಿ ಸೈನಿಕರು ಮಧ್ಯಾಹ್ನ ಎಂದಿನಂತೆ ಊಟ ಸವಿದಿದ್ದಾರೆ ಕೆಲ ಸಮಯದಲ್ಲಿ ಸುಮಾರು 35
ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ ಪಡುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ಪ್ರದೇಶದಲ್ಲಿ ಎರಡು ಜನರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ಹೋಗಲು ಕೆಲಸಗಾರರು ಭಯ ಪಡುವಂತಾಗಿದೆ.
ಸಕಲೇಶಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಲ್ಲಿ ಅವೈಜ್ಞಾನಿಕ ಶೌಚಾಲಯದ ಕಾಮಗಾರಿ ನಡೆದಿದ್ದು ಬೆಳಕಿಗೆ ಬಂದಿದೆ. ಯಾವುದೇ ಒಂದು ಶೌಚಾಲಯ ನಿರ್ಮಾಣವಾಗಬೇಕಾದರೆ ಮೊದಲು ಪಿಟ್ ಗುಂಡಿಯನ್ನು ತೆಗೆಸಿ ವ್ಯವಸ್ಥಿತವಾಗಿ ಅದಕ್ಕೆ ಪೈಪ್ ಲೈನ್ ಅಳವಡಿಸಿ ನಂತರ ಶೌಚಾಲಯ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ ಇಲ್ಲಿ ಅವಜ್ಞಾನಿಕ ಕಾಮಗಾರಿ ನಡೆಸಿ ಪಿಟ್ ಗುಂಡಿಯೇ ಇಲ್ಲದೆ ಶೌಚಾಲಯದ ನೀರನ್ನು ಹೊರಗೆ ಬಿಡಲಾಗಿದೆ ಇದರ ಪರಿಣಾಮವಾಗಿ ಕೆಟ್ಟ ದುರ್ವಾಸನೆ ಇಂದ ಪರಿಸರ