ಪುತ್ತೂರು: ಶ್ರೇಷ್ಠ ನಾಯಕತ್ವ, ಜನಪರ ನೀತಿ ಮತ್ತು ಶಿಸ್ತುಬದ್ಧವಾದ ನಿಯತ್ತು ಇದ್ದ ಪಕ್ಷ ಸಂಘಟನಾತ್ಮಕವಾಗಿ ಬೆಳೆಯುತ್ತದೆ ಹಾಗೂ ದೇಶದ ಪಾಲಿಗೆ ಆಸ್ತಿಯಾಗುತ್ತದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದ ವಿಶೇಷ ಸಭೆಯನ್ನು ಶುಕ್ರವಾರ ಪುತ್ತೂರಿನ ಟೌನ್ ಕೋ ಆಪರೇಟಿವ್ ಬ್ಯಾಂಕ್
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ನಗರಮಂಡಲ ಬೂತ್ ಪ್ರಮುಖರ ಸಭೆ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾಂಗ್ರೆಸ್ ತನ್ನ 60 ವರ್ಷದ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಭ್ರಷ್ಟಾಚಾರ, ಭಯೋತ್ಪಾದನೆ, ವಂಶಾಡಳಿತ. ಅದಕ್ಕಾಗಿಯೇ ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್ ಎಂದೇ ಜನಮಾನಸದಲ್ಲಿ ಬಿಂಬಿತವಾಗಿದೆ.
ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಅಧ್ಯಾಪಕರಿಲ್ಲದೆ ಮುಚ್ಚುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಅನುದಾನಿತ ಶಾಲೆಗಳಿಗೂ ಅತಿಥಿ ಶಿಕ್ಷಕರನ್ನು ನೇಮಕ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರಿಗೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಆಗ್ರಹಿಸಿದರು.
ಪುತ್ತೂರು: ಕೊರೊನಾ ರೂಪಾಂತರಿ ತಳಿಗಳಿಂದಾಗಿ ದಿನನಿತ್ಯ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಆರ್ಥಿಕ ಸ್ಥಿತಿಗತಿಗಳು ಕುಸಿಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. ಸರ್ಕಾರಿ ಯೋಜನೆಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರು ಪುರಭವನದಲ್ಲಿ ನಗರಸಭೆಯ ವತಿಯಿಂದ ಪ್ರಧಾನ ಮಂತ್ರಿ ಅವಾಝ್ ಯೋಜನೆಯಡಿ ಪ.ಜಾತಿ
ಪುತ್ತೂರು. ಕಾಂಗ್ರೇಸ್ ರಾಜ್ಯದ ಜನತೆಯ ಆರೊಗ್ಯದ ಮೇಲೆ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಇದು ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು,ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂದವಿಲ್ಲ ಎಂದರು. ಮುಂದಿನ ವಿಧಾನಸಭಾ
ತೋಟಗಾರಿಕ ಬೆಳೆಯಾಗಿರುವ ಅಡಿಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ತಾಲೂಕುಗಳ ಕೃಷಿಕರ ಜೀವನಕ್ಕೆ ಆಧಾರವಾಗಿದೆ. ಧಾರಣೆಯ ಏರಿಳಿತಗಳ ಹೊರತಾಗಿಯೂ ಈ ಭಾಗಗಳ ಜನ ಅಡಿಕೆ ಬೆಳೆಯನ್ನೇ ಅವಲಂಬಿಸಿದ್ದಾರೆ. ದಶಕಗಳ ಹಿಂದೆ ಅಡಿಕೆ ಮರಗಳಿಗೆ ತಗಲಿದ ಹಳದಿ ರೋಗವೆಂಬ ಹೆಮ್ಮಾರಿ ಈಗ ಹೆಮ್ಮರವಾಗಿ ಬೆಳೆದು ಎಕರೆಗಟ್ಟಲೆ ಅಡಿಕೆ ತೋಟಗಳನ್ನು ನಾಶ ಮಾಡಿದೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಅಡಿಕೆ ಮರಗಳನ್ನು ಬಾಧಿಸಿರುವ ಈ ರೋಗಕ್ಕೆ ಸೂಕ್ತ ಪರಿಹಾರ
ಪುತ್ತೂರು: ಕೆಎಸ್ಆರ್ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ
ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ
ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟಿದ್ದರು. ಇವರಿಗೆ ಈಗ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ