Home Posts tagged #sdm ujire (Page 6)

ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನ್ಯಾಕ್ ಅತ್ಯುನ್ನತ ಗ್ರೇಡ್

ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್‍ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್ ಪರಿಶೀಲನೆಯ ಪ್ರಕ್ರಿಯೆಯ ಭಾಗವಾಗಿ ಮೂವರು ತಜ್ಞ ಸದಸ್ಯರ ತಂಡವು ಕಳೆದ ತಿಂಗಳ 30 ಹಾಗೂ 31ರಂದು ಕಾಲೇಜಿಗೆ ಭೇಟಿ ನೀಡಿತ್ತು. ಓರಿಸ್ಸಾದ

ಸಾಹಿತ್ಯ ಸಮ್ಮೇಳನದಲ್ಲಿ ಜನಮನ ರಂಜಿಸಿದ ಯಕ್ಷ ‘ಗಾನ’ ವೈಭವ

ಉಜಿರೆ, ಫೆ.6: ‌ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು. ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್ ಕಿಜಕ್ಕಾರ್ ಅವರ ಚೆಂಡೆಯ ನಾದ ಹಾಗೂ ಕಿಶನ್ ರಾವ್ ಅವರ ಚಕ್ರತಾಳ ದನಿಯೊಂದಿಗೆ ವಿದ್ಯಾರ್ಥಿನಿಯರಾದ ಹೇಮಾ,

ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ತಾಯಿಗೆ ಸ್ವರಾಭಿಷೇಕಗೈದ ‘ಸುಮಧುರ ಗೀತೆಗಳ ಗಾಯನ’

ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು. “ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ

ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಾಹಿತ್ಯ ಸಮ್ಮೇಳನಕ್ಕೆ ತೆರೆ 

ಉಜಿರೆ, ಫೆ.6: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ಸಂಪನ್ನಗೊಂಡ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ರಂಗು ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಿತು. ಸಂಜೆ ಸಮ್ಮೇಳನದ ಸಮಾರೋಪದ ಬಳಿಕ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮದ ಮುಂಚೂಣಿಯಲ್ಲಿ ಮಂಗಳೂರು ಮತ್ತು ಉಜಿರೆಯ ವಿಶೇಷಚೇತನ ಮಕ್ಕಳ ಶಾಲೆ ‘ಸಾನಿಧ್ಯ’ದ ಮಕ್ಕಳಿಂದ ನಾಲ್ಕು ಕಾರ್ಯಕ್ರಮಗಳು

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ 4ನೇ ಗೋಷ್ಠಿಯ ‘ರಂಗವೈಖರಿ’ ಕಾರ್ಯಕ್ರಮದಲ್ಲಿ ‘ಯಕ್ಷಗಾನ’ ಕುರಿತು ವಿಶೇಷ ಉಪನ್ಯಾಸಕರಾಗಿ

ವಿಶೇಷ ಉಪನ್ಯಾಸ: ‘ಮಂಕುತಿಮ್ಮನ ಕಗ್ಗ-ಜೀವನ ಮೌಲ್ಯ’

ಉಜಿರೆ, ಫೆ.5: ಉತ್ತಮ ಮೌಲ್ಯಗಳಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜದ ಸುಭದ್ರತೆ ಸಾಧ್ಯವಾಗುತ್ತದೆ ಎಂದು ಪ್ರವಚನಕಾರ ಜಿ.ಎಸ್. ನಟೇಶ್ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ. ಐತಪ್ಪನಾಯ್ಕ ಹತ್ತು ನಿರ್ಣಯಗಳನ್ನು ಮಂಡಿಸಿದರು: ಜಿಲ್ಲೆಯಲ್ಲಿ ಮಂಜೂರಾದ ಕನ್ನಡ ಭವನಗಳ

‘ಜ್ಞಾನವಿಕಾಸ’ಕ್ಕೆ ವೇದಿಕೆಯಾದ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಅಭಿಮಾನಿಗಳ ಗಮನ ಸೆಳೆದದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮಹಿಳಾ ಸ್ವ-ಸಹಾಯ ಸಂಘದ ಜ್ಞಾನವಿಕಾಸ ಮಾಹಿತಿ ಕೇಂದ್ರ. ಜ್ಞಾನವಿಕಾಸ ಯೋಜನೆಯ ಕಾರ್ಯರೂಪಗಳನ್ನು ಮರದ ರೂಪದಲ್ಲಿ ವಿನ್ಯಾಸಗೊಳಿಸಿ ಇದರ ಕಾರ್ಯಚಟುವಟಿಕೆಗಳನ್ನು ರೆಂಬೆಕೊಂಬೆಗಳ ರೂಪದಲ್ಲಿ

ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಮಿನಿ ವಸ್ತು ಸಂಗ್ರಹಾಲಯ

ಉಜಿರೆ: ಇಲ್ಲಿನ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ 25ನೆಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯಲಾಗಿದ್ದ ಮಂಜೂಷಾ ವಸ್ತುಸಂಗ್ರಹಾಲಯದ ಪ್ರದರ್ಶನ ಮಳಿಗೆ (ಮಿನಿ ವಸ್ತು ಸಂಗ್ರಹಾಲಯ) ಸಾಹಿತ್ಯ ಪ್ರೇಮಿಗಳ ಜೊತೆಗೆ ಎಲ್ಲ ಪ್ರೇಕ್ಷಕರ ಗಮನ ಸೆಳೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷ ಆಕರ್ಷಣೆಯಾದ ‘ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನ ಪ್ರತಿಷ್ಠಾನ ಪ್ರಾಚ್ಯ ವಿದ್ಯಾ ಸಂಶೋಧನ ಸಂಸ್ಥೆ’ ಮತ್ತು ‘ಮಂಜೂಷಾ ವಸ್ತು

ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಸಾಹಿತ್ಯ, ರಂಗಭೂಮಿ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ ಬಗೆಗಿನ ಪ್ರಶ್ನೆಗಳಿಗೆ ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆ ಉತ್ತರಿಸಿದರು.