Home Posts tagged #sdm ujire (Page 7)

ಉಜಿರೆ: 25ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಉಜಿರೆ, ಫೆ.5: ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ ಅಧ್ಯಯನಕ್ಕೆ ಅವಕಾಶ ಕನ್ನಡ ಕಲಿಕೆಗೆ ಪ್ರೋತ್ಸಾಹ ಮುಂತಾದ ಹತ್ತು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಉದಯರಾಗದೊಂದಿಗೆ ಎರಡನೇ ದಿನ ಆರಂಭ

ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯುತ್ತಿರುವ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವು ಉದಯರಾಗದೊಂದಿಗೆ ಆರಂಭಗೊಂಡಿತು. ಮಣಿಕೃಷ್ಣ ಸ್ವಾಮಿ ಅಕಾಡೆಮಿಯ ಕಲಾವಿದರು ಕರ್ನಾಟಕ ಸಂಗೀತದ ರಸಧಾರೆಯೊಂದಿಗೆ ಭಕ್ತಿಸುಧೆಯನ್ನು ಹರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧವಾಗಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಲೋಕಾರ್ಪಣೆಗೂಂಡ ಕೃತಿಗಳನ್ನು ಆಧರಿಸಿ ಬೆಂಗಳೂರಿನ ಅದಿತಿ ಪ್ರಹ್ಲಾದ ಹಾಗೂ ಮಂಗಳೂರಿನ ಮೇಧಾ ಉಡುಪ ಗಾಯನ

“ಸಾಮಾಜಿಕ ಕ್ರಾಂತಿಯ ನಂದಾದೀಪ ಬಸವಣ್ಣ”

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ‘ಹರಿಕಥೆ’ ನೆರೆದಿದ್ದವರ ಗಮನ ಸೆಳೆಯಿತು. ತೋನ್ಸೆ ಪುಷ್ಕಳ ಕುಮಾರ್ ಮತ್ತು ಬಳಗದವರು ‘ಜಗಜ್ಯೋತಿ ಬಸವಣ್ಣ’ ಕಥಾಕೀರ್ತನ ಪ್ರಸ್ತುತಪಡಿಸಿದರು. ಬಸವಣ್ಣನವರ

ಸಂವೇದನೆಯಿಂದ ಸಾಹಿತ್ಯದ ಸೃಷ್ಟಿ: ಅರವಿಂದ ಚೊಕ್ಕಾಡಿ

ಉಜಿರೆ, ಫೆ.4: ಸಂವೇದನಾಶೀಲತೆಯಿಲ್ಲದೆ ಸಾಹಿತ್ಯವಿಲ್ಲ. ವೇದನೆಗಳು ಸಾಹಿತ್ಯದಲ್ಲಿ ಸಂವೇದನೆಯನ್ನು ಸೃಷ್ಟಿ ಮಾಡುತ್ತವೆ. ಈ ಸಂವೇದನೆಗಳು ಸಾಹಿತ್ಯ ಹಾಗೂ ಕಾವ್ಯಗಳ ಸೃಷ್ಟಿ ಮಾಡುತ್ತವೆ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಮಟ್ಟದ 25ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನ ನಡೆದ ‘ಜಿಲ್ಲೆಯ ಸಾಹಿತ್ಯ ಪರಂಪರೆ’ ಕುರಿತ ಗೋಷ್ಠಿಯಲ್ಲಿ ಲೌಕಿಕ

ಅನೈತಿಕ ಚಟುವಟಿಕೆಗಳ ನಿರ್ಮೂಲನೆಯಲ್ಲಿ ಜನರ ಸಹಕಾರ ಅಗತ್ಯ

ಉಜಿರೆ: ಮಾನವ ಕಳ್ಳ ಸಾಗಾಣಿಕೆ ಮತ್ತು ವೇಶ್ಯಾವಾಟಿಕೆಯ ವಿವರಗಳು ಗೊತ್ತಾದ ತಕ್ಷಣವೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸಮಾಜಕ್ಕೆ ಮಾರಕವಾಗುವ ಇಂತಹ ಚಟುವಟಿಕೆಗಳ ನಿರ್ಮೂಲನೆಯಲ್ಲಿ ಈ ಬಗೆಯ ಜನಸಹಭಾಗಿತ್ವ ಮಹತ್ವದ ಪಾತ್ರವಹಿಸುತ್ತದೆ ಎಂದು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಮನಃಶಾಸ್ತ್ರ ವಿಭಾಗವು ‘ಅನೈತಿಕ ಮಾನವ ಸಾಗಣೆ

ಮುದ್ರಣಕ್ಷೇತ್ರವು ನಮ್ಮ ಜೀವನದ ಒಂದು ಅವಿಭಾಜ್ಯ ಅಂಗ – ಶೇಖರ್ ಟಿ

“ಮುದ್ರಣ ಕ್ಷೇತ್ರದಲ್ಲಿನ ಕಾರ್ಯ ಎರಡು ಮೂರು ದಿನಕ್ಕೆ ಸೀಮಿತವಾದದ್ದಲ್ಲ ನಿರಂತರ ಕೆಲಸವನ್ನು ಒಳಗೊಂಡಿದ್ದು ಜನರ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯವಾಗುತ್ತದೆ “ಎಂದು ಉಜಿರೆಯ ಮಂಜುಶ್ರೀ ಪ್ರಿಂಟಿಂಗ್ ಪ್ರೆಸ್ ನ ವ್ಯವಸ್ಥಾಪಕ ಶೇಖರ್ ಟಿ ಹೇಳಿದರು.       ಉಜಿರೆ ಶ್ರೀ ಧ ಮಂ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ “ಮುದ್ರಣ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು” ಎಂಬ ವಿಷಯದ ಕುರಿತಾದ

ಐತಿಹಾಸಿಕ ಪರಂಪರೆಯನ್ನು ಉಳಿಸಿದರೆ ಮಾತ್ರ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ: ಡಾ. ದಿವಾಕರ್ ಕೆ.

ಉಜಿರೆ: ನಮ್ಮ ಪರಂಪರೆ ಶ್ರೇಷ್ಠ ಇತಿಹಾಸದ ಸಂರಕ್ಷಣೆ ಅತ್ಯಗತ್ಯ. ವಿದ್ಯಾರ್ಥಿಗಳು ಈಗಿನಿಂದಲೇ ಈ ದಿಶೆಯಲ್ಲಿ ಜಾಗೃತರಾಗಿರಬೇಕೆಂದು ಮುಖ್ಯ ಅತಿಥಿಗಳಾದ ಡಾ. ದಿವಾಕರ್ ಕೆ ರವರು ತಿಳಿಸಿದರು.         ಇತ್ತೀಚೆಗೆ ಉಜಿರೆ ಎಸ್ ಡಿ ಎಂ. ಪದವಿ ಕಾಲೇಜಿನಲ್ಲಿ “ಐತಿಹಾಸಿಕ ಪರಂಪರೆ ಉಳಿಸಿ” ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆರವೇರಿತು. ಇದರ ಅಭ್ಯಾಗತರಾಗಿ ಆಗಮಿಸಿದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.

ಜ್ಞಾನದ ಪ್ರಾಯೋಗಿಕ ಅನ್ವಯದಿಂದ ಕಲಿಕೆ ಸಾರ್ಥಕ

ಉಜಿರೆ: ಜ್ಞಾನ ಮತ್ತು ಕೌಶಲ್ಯಗಳು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ‘ಜೆಸಿಐ ಬೆಳ್ತಂಗಡಿ ಮಂಜುಶ್ರೀ’ಯ ಅಧ್ಯಕ್ಷರಾದ ಶಂಕರ್ ರಾವ್ ಬಿ ನುಡಿದರು. ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೆಯ ಹಂತದಿಂದಲೇ ವಿದ್ಯಾರ್ಥಿಗಳು ವಿಭಿನ್ನವಾಗಿ ಯೋಚಿಸುವ

ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿ ಉಜಿರೆಯ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು

ಉಜಿರೆ ಶ್ರೀಧ ಮಂ ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಶನಿವಾರ ಭೇಟಿ ನೀಡಿ ಪುರಾತನ ಸಾಹಿತ್ಯದ ಪರಿಕರಗಳನ್ನು ವೀಕ್ಷಿಸಿದರು.       ಸ್ವತಃ ಕೈಯಲ್ಲಿ ಮುದ್ರಿಸಲಾದ ಹಾಳೆಗಳಲ್ಲಿ ಚಿನ್ನದ ಮಿಶ್ರಣವನ್ನು ಸೇರಿಸಿ ಬರೆಯಲಾದ ಲಿಪಿಗಳನ್ನು ಹಾಗೂ ಹಿಂದಿನ ತಾಳೆಗರಿಗಳು, ಪುಸ್ತಕಗಳು ಹಾಗೂ ಲಿಪಿಗಳನ್ನು ಸಂಗ್ರಹಿಸಿ ಸಂರಕ್ಷಿಸುವ ವಿಧಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡರು.  

ಪರಿಸರದೊಂದಿಗೆ ನಮ್ಮ ಮನಸ್ಥಿತಿ ಕೂಡ ಕಲುಷಿತಗೊಳ್ಳುತ್ತಿದೆ: ಡಾ. ನರೇಂದ್ರ ರೈ ದೇರ್ಲ

ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು      ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ