ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ “ಬಿ”ಯ ಪ್ರಧಾನ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್ ನಿವೃತ್ತರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಅಮಿತ್ ಪ್ರಕಾಶ್ ರೊಡ್ರಿಗಸ್ ಮತ್ತು ಸೈಂಟ್ ಜೋಕಿಮ್ಸ್ ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿಯಾದ ಸಿ| ಗ್ರೇಟಾ ಮಸ್ಕರೇನಸ್ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರಿಗೆ ಪದಗ್ರಹಣ ಕಾರ್ಯಕ್ರಮವು ಸೈಂಟ್ ಜೋಕಿಮ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ವತಿಯಿಂದ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು ಕಷ್ಟ ಸಾಧ್ಯ. ಆದರೆ ತಮ್ಮ ಮೂರೂವರೆ ದಶಕದ ಸುಧೀರ್ಘ ಸೇವೆಯ ಅವಧಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿದು
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿ, ಸಕಾರಾತ್ಮಕ ಮನೋಭಾವದೊಂದಿಗೆ ಜೀವನ ರೂಪಿಸಿಕೊಳ್ಳಿ. ಯಾವುದೇ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಪಡೆದ ಪದವಿ ವಿದ್ಯಾಭ್ಯಾಸದ ನೆರವಿನಿಂದ ಉತ್ತಮ ಜೀವನ ರೂಪಿಸಿಕೊಳ್ಳುವುದು ಪ್ರಮುಖವಾದುದು ಎಂದರು.ಸಭೆಯ























