ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅವರ ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಗೀತಾರ ಪತಿ ನಟ ಶಿವರಾಜಕುಮಾರ್, ಮಾಜೀ ಮಂತ್ರಿ ಕಿಮ್ಮನೆ ರತ್ನಾಕರ್, ಮಂಜುನಾಥ ಭಂಡಾರಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಅಭಿಮಾನಿಗಳು ಶಿವಣ್ಣ ಶಿವಣ್ಣ ಎಂದು ಹೊರಗೆ ಜಮಾಯಿಸಿದ್ದರು.ಅನಂತರ ರಾಮಣ್ಣ ಶ್ರೇಷ್ಟಿ ಉದ್ಯಾನದಲ್ಲಿ ಮೆರವಣಿಗೆ ಮತ್ತು
ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು. ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಶ್ರೀಮಂತವಾಗಿರುವ ಕ್ಷೇತ್ರ,
ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ ಶಿಬಿರವನ್ನು ಹಮ್ಮಿಕೊಂಡಿತ್ತು. ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆ ಗಳಿಂದ ನೂರಾರು ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ
ಅಟೋ ರಿಕ್ಷಾವೊಂದರ ಮಾಲಿಕರಿಗೆ ಶ್ವಾಕ್…ಅಟೋ ಚಲಾಯಿಸುವ ಸಂದರ್ಭ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ ದಿಂದ ಎರ್ಮಾಳಿನ ಅಟೋ ಚಾಲಕರೊರ್ವರಿಗೆ 500 ರೂಪಾಯಿ ದಂಡ ಪಾವತಿಸುವಂತೆ ನೋಟಿಸು ಜಾರಿಯಾಗಿದೆ. ಅಟೋ ರಿಕ್ಷಾದ ನೋಂದಾವಣೆ ಸಂಖ್ಯೆ, ಫೋಟೋ ದ್ವಿಚಕ್ರವಾಹನದ್ದಾಗಿದ್ದು, ಹೆಲ್ಮೆಟ್ ಧರಿಸದೆ ಸಂಚಾರ ನಿಯಮ ಉಲ್ಕಘಿಸಿದ ನೀವು ದಂಡ ಕಟ್ಟುವಂತೆ ಮೊಬೈಲ್ ಗೆ ಮ್ಯಾಸೇಜ್ ಬಂದಾಗ ಅಟೋ ಚಾಲಕ ತಬ್ಬಿಬ್ಬು ನಾನು ಶಿವಮೊಗ್ಗ ಕಡೆ ಹೋಗಿಯೇ ಇಲ್ಲ, ಅಲ್ಲದೆ ಎಲ್ಲಿಯೂ
ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ
ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್
ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ ಆಧುನಿಕ ಯುಗದಲ್ಲಿ ಕಾಡು ಉಳಿಸುವಂತಹದ್ದು ಸವಾಲಾಗಿದೆ. ಅರಣ್ಯವನ್ನು ಹತ್ತಿರದಿಂದ ನೋಡುವಂತಹ ಸೌಭಾಗ್ಯವನ್ನು ಅರಣ್ಯ ವಿಹಾರ ಸಂಸ್ಥೆ ನಮ್ಮೆಲ್ಲರಿಗೆ ನಮ್ಮ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರ ನೇತೃತ್ವದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಸಂಸ್ಥೆಯ