ಈ ಮಳೆಗಾಲ ಸರಿಯಾಗಿರದೆ ಕರ್ನಾಟಕದ 223 ತಾಲೂಕುಗಳು ಬರಪೀಡಿತ. ಸೋಮಾರಿ ಕೇಂದ್ರ ಸರಕಾರ ಪರಿಹಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಸದ್ಯ ಬಾಧಿತ ರೈತರಿಗೆ ರೂಪಾಯಿ 2,000ದಷ್ಟಾದರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಕಚೇರಿ ಕೃಷ್ಣದಲ್ಲಿ ಅವರು ಮಂತ್ರಿ ಮತ್ತು ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.
ಅನೈತಿಕ ಪೊಲೀಸ್‍ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿಯೇ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳ್ತಂಗಡಿ ಭೇಟಿಯ ನಿಮಿತ್ತ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.ಕಳೆದ ಎರಡು ತಿಂಗಳ ಅವಧಿಯಲ್ಲಿ ಮಂಗಳೂರಿನಲ್ಲಿ ಏಳೆಂಟು ಅನೈತಿಕ