ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಮಹೇಶ್ 43 ನಂಬರಿನ ಸಿಟಿ ಬಸ್‌ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ
ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.