Home Posts tagged SSLC EXAMS

SSLC – ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರಿನ ಬಂಟರಯಾನೆ ನಾಡವರ ಮಾತೃಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 14 ವಿಶಿಷ್ಟ ಶ್ರೇಣಿ, 33 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡಾ 97 ಫಲಿತಾಂಶದೊಂದಿಗೆ ಶಾಲೆಯು A ಶ್ರೇಣಿಯನ್ನು ಪಡೆದುಕೊಂಡಿದೆ. ಶಾಲೆಯ

ಮೂಡುಬಿದಿರೆ: SSLC ಫಲಿತಾಂಶ -ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ರೋಟರಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 41 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 67 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮೂವರು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ ಒರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಚಿತಾ ಎಸ್. ಸುವರ್ಣ 613

ಮಂಗಳೂರು : SSLC ಫಲಿತಾಂಶ – ಬಿ.ಜಿ.ಎಸ್. ವಿದ್ಯಾರ್ಥಿ ಮಹಿತ್ ಕುಮಾರ್ ಗೆ 607 ಅಂಕ

ಮಂಗಳೂರು : ಕಾವೂರಿನ ಬಿ.ಜಿ.ಎಸ್. ಹೈಸ್ಕೂಲ್ ವಿದ್ಯಾರ್ಥಿ ಮಹಿತ್ ಕುಮಾರ್ ಈ ಬಾರಿಯ SSLC ಪರೀಕ್ಷೆಯಲ್ಲಿ 607 ಅಂಕ ಪಡೆದು 97.12 % ದಾಖಲೆಯ ಸಾಧನೆ ಮಾಡಿದ್ದಾನೆ. ‌ ಬಿ.ಜಿ.ಎಸ್. ಶಾಲೆಯ ಗರಿಷ್ಠ ಅಂಕ ಪಡೆದ ಟಾಪರ್ ವಿದ್ಯಾರ್ಥಿಯಾಗಿರುವ ಮಹಿತ್ ಕುಮಾರ್ ಅವರು ಭಾಸ್ಕರ್ ಗಟ್ಟಿ ಕೌಡೂರು ಹಾಗೂ ಸೌಮ್ಯ ಗಟ್ಟಿ ನಡಾರ್ ಇವರ ಪುತ್ರ. ಗರಿಷ್ಠ ಅಂಕದೊಂದಿಗೆ ಶಾಲೆಗೆ ಕೀರ್ತಿ ತಂದ ಸಾಧನೆ ಮಾಡಿದ ಮಹಿತ್ ಅವರನ್ನು ಶಾಲಾಡಳಿತ ಮಂಡಳಿ ಅಭಿನಂದಿಸಿದೆ.

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ

SSLC ವಾರ್ಷಿಕ ಪರೀಕ್ಷೆ: ಪುತ್ತೂರು, ಕಡಬದಲ್ಲಿ ಪ್ರಥಮ ದಿನ 42 ವಿದ್ಯಾರ್ಥಿಗಳು ಗೈರು

ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಪ್ರಥಮ ದಿನವಾದ

ಮಾರ್ಚ್ 25ರಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ