ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ಉಪ ನಾಯಕನನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸುತ್ತೇನೆ. ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿಭಾಯಿಸಿ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಗೌರವ ತರುವ ಕೆಲಸ ಮಾಡುತ್ತೇವೆ. ಈ ಜವಾಬ್ದಾರಿ ತನ್ನ ಕ್ಷೇತ್ರದ ಮತದಾರರಿಗೆ ಸಂದ ಗೌರವಾಗಿದೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ, ಶಾಸಕ ಯು.ಟಿ.ಖಾದರ್
ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.