Home Posts tagged #subhramanya

ಜವಾಬ್ದಾರಿ ಮೆರೆದ ಪತ್ರಕರ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ

ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಇಲ್ಲ : ಕುಕ್ಕೆಯಲ್ಲಿ ಸಚಿವ ಎಸ್.ಅಂಗಾರ

ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ರವಿವಾರ ಕುಕ್ಕೆ ಶ್ರೀ

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್

ಕಡಬ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.