Home Posts tagged #subramanya

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ

ಸುಬ್ರಹ್ಮಣ್ಯ :ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್. ಅಂಗಾರರಿಂದ ಶಂಕುಸ್ಥಾಪನೆ

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,

ಕುಕ್ಕೆ ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ದ ಕಿರುಷಷ್ಠಿಯ ದಿನವಾದ ಬುಧವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ ನೆರವೇರಿತು. ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು

ಕುಕ್ಕೆ ಸುಬ್ರಹ್ಮಣ್ಯ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ದೇವಸ್ಥಾನದ ಹೆಸರಿಗೆ ಮಾಲಿಕತ್ವದ ಪ್ರಮಾಣಪತ್ರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ

ತೊಕ್ಕೊಟ್ಟು ಫ್ಲೈಓವರ್‌ನಿಂದ ಕೆಳಬಿದ್ದ ಬುಲೆಟ್ ಸವಾರ ಸಾವು

ಉಳ್ಳಾಲ: ಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ. ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಸಾವನ್ನಪ್ಪಿದವರು. ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್ ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯ