ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ. ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು
ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆಯಾಗಿದ್ದಾಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್
ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ
ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಕಳೆದ ರಾತ್ರಿ ಕೋವಿ
ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ನಿವಾಸಿಯಾಗಿರುವ ಅಶ್ವಿನಿ ಬಂಗೇರ ಅವರು, ಸದ್ಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದು, ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೆ ಶರಣಾಗಿದ್ದಾಳೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್
ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ



























