Home Posts tagged suicide

ಉಳ್ಳಾಲ: ನಾಪತ್ತೆ ಆದ ಯುವಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

ಉಳ್ಳಾಲ: ಜು. 2 ರಂದು ರಾತ್ರಿ ಮಲಗುವ ಕೊಠಡಿ ಯಿಂದ ನಾಪತ್ತೆಯಾದ ಬೀರಿ‌ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ‌ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.ಕೋಟೆಕಾರು ಬೀರಿ ನಿವಾಸಿ ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಜು.2ರಂದು ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದನುಈ ಕುರಿತು ತಂದೆಯವರು

ಉಪ್ಪಿನಂಗಡಿ: ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ . ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪುತ್ತೂರು: ಗುತ್ತಿಗೆದಾರ ವಿಜಯ್ ಕುಮಾರ್  ಆತ್ಮಹತ್ಯೆ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ