ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ.
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವವು ನವೆಂಬರ್ 27ರಿಂದ ಡಿಸೆಂಬರ್ 12ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ದೇವಳದಲ್ಲಿ 2024-25ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂಬಂಧ ನವೆಂಬರ್ 26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ಇರುವುದರಿಂದ ಭಕ್ತಾಧಿಗಳಿಗೆ ಬೆಳಗ್ಗಿನಿಂದ ಮಧ್ಯಾಹ್ನ 2ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ.ಭಕ್ತಾಧಿಗಳು ಸಹಕರಿಸುವಂತೆ ಶ್ರೀ
ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ
ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ ಸುಟ್ಟುಹೋಗಿದೆ. ಪ್ರಿಡ್ಜ್ ಮೇಲಿದ್ದ ಎರಡು ಮೊಬೈಲ್ ಹಾಗೂ ಇನ್ನಿತರ ಹಲವು ವಸ್ತುಗಳು ಸುಟ್ಟುಹೋಗಿವೆ. ನೆರೆಕರೆಯ ಅಂಗಡಿಯವರು ಹಾಗೂ ರಿಕ್ಷಾ ಚಾಲಕರು ಮತ್ತಿತರರು ಬೆಂಕಿ ನಂದಿಸಲು ಸಹಕರಿಸಿದ್ದು ಹೆಚ್ಚಿನ
ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಗಾಟಿಸಿ ಶಾಲಾ ಪೂರ್ವ
ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಸಂಧ್ಯಾರಶ್ಮಿ ಸಭಾಭವನದಲ್ಲಿ ಮಾತನಾಡಿದರು. ಕನ್ನಡ ಭಾಷೆ ರಾಜಾಶ್ರಯ ಇಲ್ಲದೇ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ ಗೌಡ ಕೊಯಿಂಗಾಜೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮವನ್ನು ರವಿಪ್ರಸಾದ್ ಇಳಂದಿಲ ನಡೆಸಿಕೊಡಲಿದ್ದಾರೆ.
ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ. ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು ಸುಳ್ಯದಪ್ರಭಾರ ತಹಶೀಲ್ದಾರರಾದ ಮಂಜುನಾಥ್ ಎಂ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ ತಾಲೂಕಿನ ವಿವಿಧ ಭಾಗದ ಮಕ್ಕಳಿಂದ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭ ಗೊಂಡು ಶ್ರೀ ಶಾರದಾಂಬ