ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ ತಾಲೂಕಿನ ವಿವಿಧ ಭಾಗದ ಮಕ್ಕಳಿಂದ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭ ಗೊಂಡು ಶ್ರೀ ಶಾರದಾಂಬ
ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ 105ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಚಾಲನೆ ನೀಡಿದರು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುಳ್ಯ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ105 ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್
ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾದುದು. ಹಿಂದೆ ಸಮಾಜದಲ್ಲಿ ಪ್ರತಿ ಸಭೆ ಸಮಾರಂಭಗಳಲ್ಲಿ ಶಿಕ್ಷಕರ ಉಪಸ್ಥಿತಿ ಅತ್ಯಂತ ಅಗತ್ಯವಾಗಿತ್ತು ಹಾಗೂ ಅವರೇ ಯಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದ್ದರು. ಅಂತೆಯೇ ಹೆಚ್ಚಿನ ಸ್ಥಾನಮಾನಗಳನ್ನು ಪಡೆದುಕೊಳ್ಳುತ್ತಿದ್ದರು. ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ ಯಶಸ್ಸು ಖಂಡಿತ ಎಂದು ತಾಲೂಕು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಕಾಲೇಜಿನ ಆಡಳಿತ ಅಧಿಕಾರಿ
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್‌ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ/ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ ಕೆ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಯಾನಂದ ಕಲ್ನಾರ್ ವಹಿಸಿದ್ದರು. ಸಭೆಯ ಕಾರ್ಯಕಲಾಪಗಳ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷತೆಗೆ ಲೋಕೇಶ್ ಪೆರ್ಲಂಪಾಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಸ್ಪರ್ಧಿಸಿದ್ದರು. ಅಧ್ಯಕ್ಷತೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಜ್ಞಾ ಎಸ್. ನಾರಾಯಣ್,
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಲಾಗಿ, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ




























