ಪಂಜ: ಮಾಯಿಲ ಕೋಟೆ ಸೀಮೆ ದೈವಸ್ಥಾನ ಪಂಜ ಇದರ ಜೀರ್ಣೋದ್ಧಾರ ಸಮಿತಿ ರಚನೆ ಗೊಂಡಿತು.ಗೌರವಾಧ್ಯಕ್ಷರಾಗಿ ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಅಧ್ಯಕ್ಷರಾಗಿಸದಾಶಿವ ಪಳಂಗಾಯ, ಕಾರ್ಯಾಧ್ಯಕ್ಷರಾಗಿ ಬಿಶ್ವಜಿತ್ ಪಳಂಗಾಯ,ಉಪಾಧ್ಯಕ್ಷರಾಗಿ
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆಯಲ್ಲಿ ‘ಹಸಿರು ಉಸಿರು’ ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪೆರಾಜೆ ಗ್ರಾಮ
ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪದವಿ
ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮದೇವರಾದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ 13ರಿಂದ ಮೇ 4ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ಗಂಧ ಮತ್ತು ಅನ್ನ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಿದ್ದಾರೆ.
ಸುಳ್ಯದಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಮೇ 2ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಒಡಬೈಯಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಆರಂಭಗೊಳ್ಳಲಿದೆ. ನೆಕ್ಸಾ ಕಾರುಗಳ ಪ್ರದರ್ಶನ ಮತ್ತು ಮಾರಾಟ, ಹಳೇ ಕಾರುಗಳ ವಿನಿಮಯ ಮತ್ತು ಮಾರಾಟ, ಇನ್ಶೂರೆನ್ ರಿನಿವಲ್ ಹಾಗೂ ಸುಲಭ ವಾಹನ ಸಾಲ ಸೌಲಭ್ಯಗಳು ಲಭ್ಯವಿದೆ ಹೆಚ್ಚಿನ ಮಾಹಿತಿಗಾಗಿ ನೆಕ್ಸಾ ಮಾಂಡೋವಿ ಮೋಟರ್ಸ್ ಪ್ರೈವೇಟ್ ಲಿಮಿಟೆಡ್, ಸಮಿಟ್ ಅಪಾರ್ಟ್ಮೆಂಟ್ ಬಿಲ್ಡಿಂಗ್, ಏರ್ಪೋರ್ಟ್ ರೋಡ್, ಮೇರಿ ಹಿಲ್,
ಸುಳ್ಯ: ನಾನು ಎಂಬ ಅಹಂಭಾವ ಹಾಗೂ ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಹೇಳಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಲಾದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಅವರು ಮಾತನಾಡಿದರು. ಸಂಸ್ಕಾರ, ಶಿಸ್ತು, ಸಂಯಮಗಳು ಜೊತೆಗಿದ್ದರೆ ಭವ್ಯ ಬದುಕಿನಲ್ಲಿ ದಿವ್ಯತೆಯ ಅನುಭವವನ್ನು
ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,