ಸುಳ್ಯ: ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ
ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಬರುವ ಕಷ್ಟ
ಸುಳ್ಯ: ಪೇರಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ನಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಖತೀಬ್ ಶಾಫಿ ಧಾರಿಮಿ ರಂಜಾನ್ ಪಾವಿತ್ರತೆ ಬಗ್ಗೆ ತಿಳಿ ಹೇಳಿ ದಾನ,ಧರ್ಮ,ಕುಟುಂಬ ಸಂಬಂಧ, ಸಹೋದರತೆ ಮಹತ್ವ ಬಗ್ಗೆ ತಿಳಿಸಿ ಅದಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿ ಈದ್ ಹಬ್ಬದ ಶುಭಾಶಯ ತಿಳಿಸಿದರು. ಜಮಾತ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಉಪಾಧ್ಯಕ್ಷರು ಟಿ ಬಿ ಹನೀಫ್, ಕಾರ್ಯದರ್ಶಿ ಪಿ ಕೆ ಉಮ್ಮರ್ ಗೂನಡ್ಕ, ಖಜಾಂಜಿ ಟಿ ಎ ಮೊಹಮ್ಮದ್ ಕುಂಞಿ ತೆಕ್ಕಿಲ್,ಎಂ ಆರ್ ಡಿ
ಸುಳ್ಯ: ಬೆಳ್ಳಾರೆ ದಿನಾಂಕ 08-04-2024 ರಂದು ಬೆಳ್ಳಾರೆ ಪೋಲಿಸ್ ( ಹೆಡ್ ಕಾನ್ಸ್ಟೇಬಲ್ ) ಸತೀಶ್ ಪುತ್ತೂರು- ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ಬಿದ್ದು ಸಿಕ್ಕಿದ 10.000/ ನಗದು ಹಾಗೂ ದಾಖಲೆಗಳನ್ನು ಒಳಗೊಂಡ ಪ್ಲಾಸ್ಟಿಕ್ ಲಕೋಟೆಯನ್ನು ಅದರ ವಾರಾಸುದಾರ ರುಕ್ಮಯ್ಯ ಗೌಡ ಪೈಚಾರುರವರ ಮೊಬೈಲ್ ನಂ. ಸಂಗ್ರಹಿಸಿ ಠಾಣೆಗೆ ಕರೆಸಿ ಈ ದಿನ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ ಅಡಿಕೆ ಗೋಣಿ ಚೀಲಗಳ ಪೈಕಿ 5 ಗೋಣಿ ಚೀಲ ಅಡಿಕೆಯನ್ನು ದಿನಾಂಕ 14.03.2024 ರಂದು ಸಂಜೆ 7:00 ಗಂಟೆಯಿಂದ ದಿನಾಂಕ 15.03.2024 ರಂದು ಬಳಿಗ್ಗೆ 6:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ
ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ ತಂತ್ರಿಗಳು ಶುಭ ಹಾರೈಸಿದರು. ಅಲ್ಲದೆ ಕೋಟಿ ಲೇಖನ
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ
ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ ಮಾಡಿ ಕೊಡುವಂತೆ, ಬೆಂಡೋಡಿ ಸರಕಾರಿ ಶಾಲೆಗೆ ಶೌಚಾಲಯ, ರಂಗಮಂದಿರ ಮತ್ತಿತರ ಸೌಲಭ್ಯ ಕಲ್ಪಿಸುವಂತೆ, ಸೇರಿದಂತೆ ಗ್ರಾಮ ವಾಸ್ತವ್ಯ ನಡೆದ ಅವಳಿ ಗ್ರಾಮಕ್ಕೆ ಸಂಬಂಧಿಸಿದಂತೆ ಗ್ರಾಮ ವಾಸ್ತವ್ಯ ದಲ್ಲಿ
ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು 6 ಅಡಿ