ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಆಗಮಿಸಿದ್ದಾರೆ.ರಾತ್ರಿ ವೇಳೆ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆ                         
        
              ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ                         
        
              ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಅದರಲ್ಲಿ                         
        
              ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ ನಡೆದಿದೆ. ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್                         
        
              ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು                         
        
                   ಸುಳ್ಯ ತಾಲೂಕಿನ ನಾರ್ಣಕಜೆಯ “ಯುವ ತೇಜಸ್ಸು” ಯುವಕರ ತಂಡವೊಂದು ಸುಮಾರು 20ಕ್ಕೂ ಹೆಚ್ಚು ಮನೆಗಳ ಸಂಪರ್ಕಿಸಬೇಕಾದ ರಸ್ತೆಯಲ್ಲಿ ಕಬ್ಬಿಣದ ಶಾಶ್ವತ ಕಾಲುಸಂಕ ನಿರ್ಮಿಸಿಕೊಡುವುದರ ಮೂಲಕ ಆ ಹಳ್ಳಿ ಜನರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ನಾರ್ಣಕಜೆಯಿಂದ ಪೈಲಾರು ಕಡೆ ಸಂಪರ್ಕಿಸಬಹುದಾದ ರಸ್ತೆಯಲ್ಲಿ ಅಡ್ಡಲಾಗಿ ಹೊಳೆ ಹರಿದು ಹೋಗುವ ಕಾರಣ ಈ ಭಾಗದ ಜನ ಮಳೆಗಾಲದಲ್ಲಿ ಮರದ ಕಾಲುಸಂಕ ಅಥವಾ ಸುತ್ತು ಬಳಸಿ ಕಿಲೋಮೀಟರ್ ಗಟ್ಟಲೆ ನಡೆದು ಹೋಗಬೇಕಾದ                         
        
              ಬಿಜೆಪಿ ಮುಖಂಡ ಜಿ.ಪಂ. ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ ಎಂದು ಹೇಳಲಾಗಿದೆ. ಪಯಸ್ವಿನಿ ನದಿಗೆ ಅಳವಡಿಸಲಾದ ತನ್ನ ತೋಟಕ್ಕೆ ನೀರು ಸರಬರಾಜುಮಾಡುವ ಪಂಪ್‌ನ ಪುಟ್ ವಾಲ್                         
        
              ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ  ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ  ಕಡಬ                         
        
























