ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಾಗಲಕೋಟೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ವಾಗಲಿದೆ .
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ರಮಾದೇವಿ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು
ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್‌ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು ಸ್ಪರ್ಧಿಸಿದ್ದವು. ಇದೀಗ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರ ಭಾನುವಾರದಂದು ಸುಳ್ಯದ ಗೌಡ ಸಮುದಾಯ
ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ
ಸುಳ್ಯ ಮಾಜಿ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಕಾರ್ಯಾಚರಿಸುವ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಸಹಕಾರ ಸಂಘದ ಅಡಿಯಲ್ಲಿ ಕೇಂದ್ರ ಸರಕಾರದ ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಎ.16ರಂದು ನಡೆಯಿತು. ಸ್ವಸಹಾಯ ಸಂಘಗಳನ್ನು ನ.ಪಂ.ಅಧ್ಯಕ್ಷೆ ಶಶಿಕಲಾ ಎ. ನೀರಬಿದಿರೆ ಉದ್ಘಾಟಿಸಿದರು. ಭಾರತ್ ವನ್ ಜನಸಂಪರ್ಕ ಕೇಂದ್ರವನ್ನು ತಹಶೀಲ್ದಾರ್ ಎಂ.ಮಂಜುಳ
ಸುಳ್ಯ:ಸುಳ್ಯ ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಧಾನ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಹಸೈನಾರ್ ಜಯನಗರ,
ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.
ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ ” ಎಂ.ಆರ್.ಐ ಸ್ಕ್ಯಾನರ್ ನಲ್ಲಿ ಕ್ಯಾಮರಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ರೋಗಿಗಳ ಉಸಿರಾಟದ ಹಾಗೂ ಹೃದಯದ ಇ.ಸಿ.ಜಿ ತರಂಗರೂಪ
ಮಂಡೆಕೋಲು ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ ಕ್ಷೇತ್ರದಲ್ಲಿ ಅನ್ನದಾನ, ವಿಧ್ಯಾದಾನ,