Home Posts tagged #sullya

ಬೈಕ್ ಡಿಕ್ಕಿ ಹೊಡೆದು ಬಾಲಕಿ ಮೃತ್ಯು

ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಬೆಳ್ಳಂಬೆಳಗ್ಗೆ ಸುಳ್ಯ, ಪುತ್ತೂರಿನ 32 ಸ್ಥಳಗಳಿಗೆ ಎನ್. ಐ. ಎ.‌ ದಾಳಿ.

ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ‌ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.

ಸುಳ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಆಚರಣೆ

ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಸಂವಹನ ಶಾಖೆ, ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಜೀತು

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ

ಅಡಿಕೆ ಕದ್ದ ಆರೋಪ : ಅಪ್ರಾಪ್ತ ಬಾಲಕನಿಗೆ ಹಲ್ಲೆ

ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಕದ್ದ ಆರೋಪದ ಮೇಲೆ ಅಪ್ರಾಪ್ತ ಬಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ, ಸುಳ್ಯ ತಾಲೂಕಿನ ಗುತ್ತಿಗಾರಿನ ಪುರ್ಲುಮಕ್ಕಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನಿಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕನಿಂದ ಮಕ್ಕಳ ಕಲ್ಯಾಣ ಸಮಿತಿಗೆ ಹಾಗೂ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾನೆ, ಹಲ್ಲೆ ನಡೆಸಿದ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.