Home Posts tagged #sulya

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್

ಕಡಬ: ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಂಧನ ಮುಕ್ತ: ಇಂದು ಸ್ವದೇಶಕ್ಕೆ ಆಗಮನ

ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು

ಕಡಬ: ದರ್ಗಾಕ್ಕೆ ನುಗ್ಗಿ ಹಣ ಕಳವು ಮಾಡಿದ ಕಳ್ಳರು

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ 10-12-2023 ರಿಂದ 24-12-2023 ರ ವರೆಗೆ ಚಂಪಾಷಷ್ಠಿ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಚಂಪಾಷಷ್ಠಿ ಮಹೋತ್ಸವವು ನಡೆಯಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ ಜಾತ್ರಾ ಉತ್ಸವಾದಿಗಳು ನಡೆಯಲಿದೆ. ಭಗವತ್ಸಂಕಲ್ಪ ಪ್ರಕಾರ ನಡೆಯತಕ್ಕ ಈ ಮಹೋತ್ಸವಗಳಿಗೆ ಭಕ್ತರು

ಕಡಬ : ನಾಳೆ ಒಕ್ಕಲಿಗ ಗೌಡ ಸಂಘದ ಪೂರ್ವಭಾವಿ ಸಭೆ

ಕಡಬ :ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಪದಗ್ರಹಣ ಕಾರ್ಯಕ್ರಮ, ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಸ್ಪಂದನ ಸಮುದಾಯ ಸಹಕಾರ ಸಂಘ (ರಿ.) ಕಡಬ ಇದರ ಉದ್ಘಾಟನಾ ಕಾರ್ಯಕ್ರಮವನ್ನು 2023ರ ಡಿಸೆಂಬರ್ 26ರಂದು ಕಡಬದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಸಮಾರಂಭ ನಡೆಯಲಿದೆ. ಈ ಸಮಾರಂಭದ ಬಗ್ಗೆ

ಸುಳ್ಯ : ಸುಳ್ಯ ಪೇಟೆಯಲ್ಲಿ ಮಳೆಗೆ ಧರೆಗುರುಳಿದ ಟ್ರಾನ್ಸ್ ಫಾರ್ಮರ್

ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರಾಶಾಹಿಯಾಗಿರುವ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.

ಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ

ಸುಳ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ

ಸುಬ್ರಹ್ಮಣ್ಯ :ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ