ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ.
ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ
ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ ಸ್ವಾಧೀನದಲ್ಲಿ ಸುಮಾರು ೫೦ ವರ್ಷಗಳಿಂದ ಇದ್ದ ಸ್ಥಳವಾಗಿರುತ್ತದೆ. ಈ ಸ್ಥಳದಲ್ಲಿ ಕಸಿ ಗೇರು ಗಿಡವನ್ನು




















