ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್‍ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ,
ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನಡೆಸಲಾಯಿತು. ಪೋಲೀಸ್ ಬಿಗಿ ಭದ್ರತೆಯಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿತು. ಪೋಲೀಸ್ ಆಯುಕ್ತ ಎನ್ ಶಶಿಕುಮಾರ್, ಹಾಸನದ ಎಸ್ ಪಿ ಹರಿರಾಂ ಶಂಕರ್ ಭದ್ರತೆಯ ಉಸ್ತುವಾರಿ ವಹಿಸಿದ್ದರು.
ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ ವೇಳೆ ಅನಗತ್ಯ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ
ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್ ಸಿಲುಕಿಕೊಳ್ಳುತ್ತಿದ್ದು ರೋಗಿಗಳು ಒದ್ದಾಡುವಂತಾಗಿದೆ.ಕೆಲಸಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತಿದೆ.ಕಳಪೆ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಸುರತ್ಕಲ್‍ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ
ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ