Home Posts tagged #surathkal (Page 5)

ಸೋರುತ್ತಿರುವ ಸುರತ್ಕಲ್ ವಲಯ ಮನಪಾ ಕಚೇರಿ || SURATKAL MCC POOR WORK: CRACKED WALLS AND WATER LEAK PROBLEM.

ಸುರತ್ಕಲ್‍ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಸೋರುತ್ತಿದೆ. ಕಚೇರಿಯ ಗೋಡೆಗಳು ಬಿರುಸುರಕು ಬಿಟ್ಟಿದೆ. ಈ ರೀತಿ ಮಳೆ ನೀರು ಸೋರುತ್ತಿದ್ದರೆ ಕಚೇರಿಯಲ್ಲಿ ಕುಳಿತುಕೊಳ್ಳಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾದಂತಾಗಿದೆ. ಕಳೆದ ವರ್ಷ ಈ ಮಂಗಳೂರು ಪಾಲಿಕೆಯ ವಲಯ ಕಚೇರಿ ಸುರತ್ಕಲ್‍ನಲ್ಲಿ ಉದ್ಘಾಟನೆಗೊಂಡಿದ್ದು, ಅಂದಿನ ಜಿಲ್ಲಾ

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಆಯ್ಕೆ

ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ ಎ ಶೆಟ್ಟಿ, ಉಪಾಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ, ಕಾರ್ಯದರ್ಶಿಯಾಗಿ ಸುಜಾತ ಶೆಟ್ಟಿ ಕೃಷ್ಣಾಪುರ, ಜೊತೆ ಕಾರ್ಯದರ್ಶಿಯಾಗಿ ವಜ್ರಾಕ್ಷಿ ಶೆಟ್ಟಿ, ಕೋಶಾಧಿಕಾರಿಯಾಗಿ ಜ್ಯೋತಿ ಪಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ನಾಗಲತಾ

ಸುರತ್ಕಲ್‍ : ಕ್ಷುಲ್ಲಕ ಕಾರಣಕ್ಕೆ ಯುವಕನಿಂದ ಚೂರಿ ಇರಿತ

ಸುರತ್ಕಲ್‍ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,

ಬಂಟರ ಸಂಘ ಸುರತ್ಕಲ್ : 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆ

ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ

ಸುರತ್ಕಲ್‍ನಲ್ಲಿ ಕಾಂಗ್ರೆಸ್ ವತಿಯಿಂದ ಭರ್ಜರಿ ರೋಡ್ ಶೋ

ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.

ನನ್ನ ಧರ್ಮವನ್ನು ಪ್ರೀತಿಸುವುದೇ ಹಿಂದುತ್ವ : ಮಂಗಳೂರು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ

ಸುರತ್ಕಲ್: ಭಯೋತ್ಪಾದಕರನ್ನು ಅಮಾಯಕರು ಎಂದು ಕರೆಯುವ ಡಿ.ಕೆ ಶಿವಕುಮಾರ್ ಅವರು ನಿಜವಾದ ಕೋಮುವಾದಿ. ಅವರಿಂದ ಒಂದು ವರ್ಗದ ತುಷ್ಟೀಕರಣವಾಗುತ್ತಿದೆ.ನಾವು ಸರಕಾರದ ಎಲ್ಲಾ ಸೌಲಭ್ಯವನ್ನು ಎಲ್ಲಾ ವರ್ಗಕ್ಕೆ ಸಮಾನವಾಗಿ ಸಿಗುವಂತೆ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಮುಕ್ಕದಲ್ಲಿ ಪಾಲಿಕೆ ವಾರ್ಡ್ 1 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ,ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ಹಿಂದುತ್ವ ಹಾಗೂ ಅಭಿವೃದ್ಧಿ ಎರಡರ ಜತೆ ಯೂ ದಿಟ್ಟ ಹೆಜ್ಜೆ

ಮಂಗಳೂರು ಉತ್ತರ ಬಿಜೆಪಿ ವತಿಯಿಂದ ರೋಡ್ ಶೋ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಅಭಿವೃದ್ಧಿ ಮತ್ತು ಹಿಂದುತ್ವ ಎರಡನ್ನೂ ಜೊತೆಯಲ್ಲಿ ಕೊಂಡೊಯ್ಯುವ

ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರ ಪ್ರಗತಿ ಪಥ ಕೈಪಿಡಿ ಬಿಡುಗಡೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ