Home Posts tagged #surathkal (Page 7)

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ

ಕರ್ತವ್ಯದಲ್ಲಿದ್ದ ಸಂದರ್ಭ ಮೃತ ಪಟ್ಟಿದ್ದ ಪೊಲೀಸ್ ಕುಟುಂಬಕ್ಕೆ 1ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು

ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಬಿಡುಗಡೆ

ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.

“ಸ್ಮಾರ್ಟ್ & ಡಿಜಿಟಲ್ ಸುರತ್ಕಲ್”ಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರಿಂದ ಚಾಲನೆ

ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ

ಜಲೀಲ್ ಕುಟುಂಬಕ್ಕೆ ನಾಗರಿಕ ಸಂಘಟನೆಗಳ ಪ್ರತಿನಿಧಿಗಳಿಂದ ಸಾಂತ್ವನ.

ಮತಾಂಧ ಕ್ರಿಮಿನಲ್ ಗಳಿಂದ ಕೊಲೆಗೀಡಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ನಡೆಸುವ ಪ್ರಯತ್ನದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು. ಯಾರ ತಂಟೆತಕರಾರಿಗೂ ಹೋಗದ, ತನ್ನ ಪಾಡಿಗೆ ಬದುಕು ನಡೆಸುತ್ತಿದ್ದ ಜಲೀಲ್ ಹತ್ಯೆ ಮತಾಂಧ ಶಕ್ತಿಗಳಿಂದ ಕುರುಡು

ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ : ನರ್ಸಿಂಗ್‌ ವಿದ್ಯಾರ್ಥಿ ಬಂಧನ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್‌ ಬಜಪೆಯಲ್ಲಿ ವಾಸವಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಕ್ಯಾನಿಂಗ್‌ಗೆ ಒಳಗಾಗುವ ಮುನ್ನ ಬಟ್ಟೆ

ಸುರತ್ಕಲ್ ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ; ಮಾ.5 ರಿಂದ 13 ರವರೆಗೆ ಬ್ರಹ್ಮಕಲಶ ಮತ್ತು ಜಾತ್ರಾ ಮಹೋತ್ಸವ

ಚಿತ್ರಾಪುರ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಚಿತ್ರಾಪುರ ಇಲ್ಲಿನ ಜೀರ್ಣೋದ್ಧಾರಕ್ಕೆ ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬ್ರಹ್ಮಕಲಶಾಧಿ ದಾರ್ಮಿಕ ಸೇವಾ ಕಾರ್ಯಗಳು ಮಾ.5 ರಿಂದ 13 ರವರೆಗೆ ಜರಗಲಿದ್ದು ,13 ರಂದು ಬ್ರಹ್ಮಕಲಶ ಮತ್ತು 14 ರಿಂದ ಜಾತ್ರಾ ಮಹೋತ್ಸವ

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ

3 ದಿನಗಳಲ್ಲಿ ಟೋಲ್‍ಗೇಟ್ ತೆರವು ಅಂತಿಮ ಆದೇಶ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಭರವಸೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು. ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ