ಹಲವು ಶತಮಾನಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆ ಬೈಂದೂರು ಸಮೀಪದ ತಗ್ಗರ್ಸೆ ಸಾಂಪ್ರದಾಯಿಕ ಕಂಬಳೋತ್ಸವವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸುವ ಮೂಲಕ ತಗ್ಗರ್ಸೆ ಕಂಬಳದ ಮೆರುಗು ಮತ್ತಷ್ಟು ಹೆಚ್ಚಿತು. ಕಂಠದಮನೆ ಟಿ. ನಾರಾಯಣ
ಇತಿಹಾಸ ಪ್ರಸಿದ್ಧ ತಗ್ಗರ್ಸೆ ಸಾಂಪ್ರದಾಯಕ ಹೆಗ್ಡೆಯವರ ಮನೆ ಅನುವಂಶಿಯವಾಗಿ ನಡೆದು ಬಂದ ಕಂಬಳ ಮಹೋತ್ಸವ ವಿಜೃಂಭಣೆ ನಡೆಯಿತು.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿರುತ್ತದೆ. ಪ್ರತಿಯೊಂದು ಕೋಣದ ಮಾಲೀಕರು ತಮ್ಮ ಕೋಣವನ್ನು ಸಿಂಗರಿಸಿ ಕೋಣಗಳ ತಲೆಗೆ ಸಿಂಗಾರು ಕೊನೆಯನ್ನು ಕಟ್ಟಿ ವಾದ್ಯದ ಮೂಲಕ ದೇವರ ಹೆಸರನ್ನು ಹೊಳಲು ಕೂಗುತ್ತಾ ಕಂಬಳ ಗದ್ದೆಗೆ ಇಳಿಸಿ ನಂತರ ಕಂಬಳ ಗದ್ದೆಯ ನೀರನ್ನು ಕೋಣಗಳಿಗೆ ಸಿಂಪಡಿಸಿ ಸ್ವಲ್ಪ