ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಲಾಯಿತು.
ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ ಕಲಾವಿದರಿಗೆ ಸರಕಾರದಿಂದ ಇನ್ನು ಮುಂದೆ ಹೆಚ್ಚು ಹೆಚ್ಚು ಪೆÇ್ರೀತ್ಸಾಹ ಹಾಗೂ ಪ್ರಶಸ್ತಿ ನೀಡಬೇಕು