ಉಳ್ಳಾಲ: ತಲಪಾಡಿ ಗ್ರಾ.ಪಂ ಎರಡನೇ ಅವಧಿಗೆ ಎಸ್ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷಿತ ಅಭ್ಯರ್ಥಿಯಾಗಿದ್ದ ಸತ್ಯರಾಜ್
ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದರು. ತಲಪಾಡಿ ಟೋಲ್ ಸಮೀಪ ಒಂದು ಕಂಟೈನರ್ ಲಾರಿಯನ್ನು ಚಾಲಕ ಶಮೀಮ್ ಚಹಾ ಕುಡಿಯಲೆಂದು
ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಚಿವ ಎ.ಕೆ.ಸಶೀಂದ್ರನ್ ಉದ್ಘಾಟಿಸಲಿದ್ದಾರೆ. ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಚಟುವಟಿಕೆಗಳ ಕಾರ್ಯಕ್ರಮದ ಭಾಗವಾಗಿ ಕಟ್ಟಡ ಲೋಕಾರ್ಪಣೆಯಾಗುತ್ತಿದೆ. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಂಸದ ರಾಜ್
ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,
ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ
ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ರು.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬರ್ಟ್ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು
ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ ಗಡಿಭಾಗವಾಗಿರುವ ತಲಪಾಡಿ, ದೇವಿಪುರ, ನೆತ್ತಿಲಪದವು ಬಳಿ ತಪಾಸಣೆ ನಡೆಸುತ್ತಿದ್ದು, ನೆತ್ತಿಲಪದವು
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.ಇವರು ಗಾಂಜ ಗಿರಾಕಿಗಳಾಗಿದ್ದು , ತಲಪಾಡಿ ರಾಷ್ಟ್ರೀಯ ಹೆದ್ದಾರಿ
ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ತಲಪಾಡಿ ಗಡಿಯಲ್ಲಿ ಕೇರಳದ ಕಡೆಯಿಂದ ಆಗಮಿಸುವ ವಾಹನ ಸಂಚಾರಕ್ಕೆ