Home Posts tagged #Tokyo Olympics 2020

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾಗೆ ಚಿನ್ನದ ಪದಕ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ  ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ ಪ್ರದರ್ಶನ ನೀಡಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದಾರೆ.ಚೋಪ್ರಾ ತನ್ನ ಎರಡನೇ ಪ್ರಯತ್ನದಲ್ಲಿ 87.58 ಮೀ.ದೂರಕ್ಕೆ ಜಾವೆಲಿನ್

ಟೋಕಿಯೋ ಒಲಿಂಪಿಕ್ಸ್: ಕುಸ್ತಿಪಟು ಬಜರಂಗ್ ಪೂನಿಯಾಗೆ ಕಂಚಿನ ಪದಕ

ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0 ಗೆಲುವು ದಾಖಲಿಸಿದರು. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ, ಗಾಯದ ಸಮಸ್ಯೆಯಿಂದಾಗಿ ಹಿನ್ನಡೆ ಅನುಭವಿಸಿದರು. ಆದರೂ ದೇಶಕ್ಕಾಗಿ ಕಂಚಿನ ಪದಕ

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್

ಟೋಕಿಯೋ ಒಲಿಂಪಿಕ್ಸ್: ಭಾರತದ ಪುರುಷರ ಹಾಕಿ ತಂಡದ ಐತಿಹಾಸಿಕ ಸಾಧನೆ

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.