Home Posts tagged #Tokyo Olympics

ಟೋಕಿಯೋ ಒಲಿಂಪಿಕ್ಸ್: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್‍ಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬ್ಯಾಡ್ಮಿಂಟನ್‌ ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು

ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಆಟ ಹೊರತಂದ ಸಿಂಧೂ, ವಿಶ್ವದ ಮಾಜಿ 3ನೇ ಶ್ರೇಯಾಂಕಿತ ಆಟಗಾರ್ತಿ ಚೀನಾದ ಹಿ ಬಿಂಗ್‌

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.      

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಸಾಧ್ಯತೆ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ 49ಕೆ.ಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ ಒಲಿಯುವ ಸಾಧ್ಯತೆ ಇದೆ. ಚೀನಾದ ಝಿಹುಯಿ ಅವರು ಚಿನ್ನದ ಪದಕ ಗೆದ್ದಿರುತ್ತಾರೆ. ಇದೀಗ ಹಿಂಪಡೆದ ಸಂಘಟಕರು ಚೀನಾದ ಝಿಹುಯಿ ಅವರನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಲು ತೀರ್ಮಾನಿಸಿದ್ದು, ಒಂದು ವೇಳೆ ಝಿಹುಯಿ ಅವರು ಉದ್ದೀಪನ ಔಷಧಿ ಸೇವಿಸಿರುವುದು ಸಾಬೀತಾದಲ್ಲಿ ಅವರು ಪದಕವನ್ನು ಕಳೆದುಕೊಳ್ಳುವರು. ಇಂತಹ ಸಂದರ್ಭದಲ್ಲಿ ಎರಡನೇ ಸ್ಥಾನದಲ್ಲಿರುವ ಮೀರಾಬಾಯಿ ಚಾನು ಅವರನ್ನು

ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್  ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.