Home Posts tagged #Tourism

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ.

ಎನ್ ಎಂಪಿಟಿಯ ನೂತನ ಪ್ರವೇಶ ದ್ವಾರದ ಶಿಲಾನ್ಯಾಸ

ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ ಎರಡು ಪಥದ ಪ್ರವೇಶ ಹಾಗೂ ಎರಡು ಪಥದ ನಿರ್ಗಮನ ದ್ವಾರ ಸೇರಿದಂತೆ ನಾಲ್ಕು ಪಥದ ರಸ್ತೆಗಳನ್ನು

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ

ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸುವ ಚಿಂತನೆ: ಸಚಿವ ಅರವಿಂದ್ ಲಿಂಬಾವಳಿ

ಕುಂದಾಪುರ: ಸೈಕ್ಲಾನ್, ಸುನಾಮಿಯಂತಹ ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಅವರು ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ