Home Posts tagged train

ಉಡುಪಿ: ದುರಂತದಿಂದ ಪಾರಾದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು

ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ

ಮುಂಬೈ: NDA ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲ – ರಮಾನಾಥ ರೈ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಾರ್ಚ್ 10ರಂದು ದೇಶದೆಲ್ಲೆಡೆ ರೈಲು ತಡೆ

ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ ಕೂಟವು ಈ ಬಗೆಗೆ ಹೇಳಿಕೆ ನೀಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ರೈತ ಸಂಘಟನೆಯವರು ಮಾರ್ಚ್ 6ರಂದು ದಿಲ್ಲಿ ಮುತ್ತಿಗೆ ಹಾಕುವುದಾಗಿಯೂ ಹೇಳಿದೆ. ಮೋದಿಯವರ ಸರಕಾರವು ರೈತರ ಚಳವಳಿ ಹೊಸಕುವುದು ಸಾಧ್ಯವಿಲ್ಲ ಎಂದು ಟಿಕಾಯತ್ ತಿಳಿಸಿದ್ದಾರೆ.

*ಮಂಗಳೂರು: ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ

ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್  ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್‌ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2