Home Posts tagged #tulu academy

ಕಾರ್ಕಳ:ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು

ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ : ಚಂದ್ರಕಲಾ ನಂದಾವರ

ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದಲ್ಲಿ ಶನಿವಾರ ಉರ್ವ ತುಳು ಭವನದಲ್ಲಿ ಆಯೋಜಿಸಿದ

ಮಂಗಳೂರು:ಆ.02ರಂದು ‘ಆಟಿದ ಬೂತಾರಾದನೆ’ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ಆಟಿದ ಬೂತಾರಾದನೆ’ ಬಗ್ಗೆ ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ ಆ.02 ರ ಶನಿವಾರ ಅಪರಾಹ್ನ 2 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.ಪತ್ರಕರ್ತ ರಮೇಶ್ ಮಂಜೇಶ್ವರ ಅವರು ದಾಖಲೀಕರಣ ಮಾಡಿರುವ ಆಟಿಯ ಭೂತಾರಾಧನೆಯ ಸಾಕ್ಷ್ಯ ಚಿತ್ರವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಹಾಗೂ ಹಿರಿಯ ಜಾನಪದ ವಿದ್ವಾಂಸರಾದ ಡಾ.ವೈ.ಎನ್.ಶೆಟ್ಟಿ ಅವರು ಬಿಡುಗಡೆ

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ

ಮಂಗಳೂರು : ತುಳು ನಾಟಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ

ಮಂಗಳೂರು: ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಕ್ರಮದ ಮೊದಲಿಗೆ ವಾಮನ ನಂದಾವರ ಅವರ ಭಾವ ಚಿತ್ರಕ್ಕೆ ಪುಷ್ಪ

ಮಂಗಳೂರು : ತುಳು, ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ವಿಧಿವಶ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು

ಪುತ್ತೂರು : ‘ಇಲ್ಲಗೊಂಜಿ ಗೇನೊದ ಬಂಡಾರ’ – ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಚಾಲನೆ

ಕರ್ನಾಟ‌ಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ‌ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ‌ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ

‘ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ‌ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು ಹಾಗೂ ಅಕಾಡೆಮಿಯ ಮಾರಾಟ ವಿಭಾಗದಲ್ಲಿರುವ ಇತರ ತುಳು ಕೃತಿಗಳನ್ನು ಈ ಸಂದರ್ಭದಲ್ಲಿ ಶಾಸಕರಿಗೆ ನಿಗದಿತ

ಮಂಗಳೂರು ‌: ಅ.25ರಂದು ಓದುವ ಅಭಿಯಾನಕ್ಕೆ ಚಾಲನೆ

ಮಂಗಳೂರು ‌: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10.00 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.ಓದುವ ಅಭಿಯಾನಕ್ಕೆ ಹಿರಿಯ