Home Posts tagged #tulu academy (Page 2)

ಸದನದಲ್ಲಿ ತುಳುವಿಗಾಗಿ ಹೋರಾಟ – ತುಳು ಅಕಾಡೆಮಿಯಿಂದ ಶಾಸಕರಿಗೆ ಸನ್ಮಾನ

ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತುಳು ಅಕಾಡೆಮಿಯಿಂದ ಸನ್ಮಾನ

ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.

ಮಂಗಳೂರು : ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ

ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಅಕಾಡೆಮಿಗಳು ರಾಜಕೀಯ

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ

ಗೋವು ನಮ್ಮೆಲ್ಲರ ತಾಯಿ – ಗೋ ಸೇವೆಯೇ ನಮಗೆ ಕರ್ತವ್ಯ –  ದಯಾನಂದ ಜಿ. ಕತ್ತಲ್‌ಸಾರ್

ಮಂಗಳೂರು:  ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು, ರತಿ, ವಾಣಿ, ಗಿರಿಜೆಯರು ನೆಲೆಗೊಂಡಿದ್ದಾರೆ ಆಕೆಯ ಮೈ ಮೇಲೆ ಹಾಗಾಗಿ ಆಕೆ ಸರ್ವತ್ರ ಪೂಜ್ಯಳು. ಸರ್ವವಂದ್ಯಳೂ ಆಗಿದ್ದಾಳೆ. ಅಂತಹಾ ಗೋಮಾತೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿ ಹೇಳಬೇಕಾದ ಅಗತ್ಯ ಇಂದಿದೆ. ಗೋವಿನ ಮಹತ್ವ, ಗೋವಿನಿಂದಾಗುವ