ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ
ಬಂಟ್ವಾಳ: ತುಂಬೆ ನೇತ್ರಾವತಿ ನದಿ ತೀರದಲ್ಲಿ ಸುಮಾರು ೫ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.೧೩ರಿಂದ ೨೩ರವರೆಗೆ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧ್ವಜಸ್ತಂಭ ಪ್ರತಿಷ್ಠೆ ಸಹಿತ ವಾರ್ಷಿಕ ಜಾತ್ರಾ ಮಹೋತ್ಸವವು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹೇಳಿದರು.
ಇನ್ನೂ ಮಳೆಗಾಲ ಮುಗಿದಿಲ್ಲ. ಅದಾಗಲೇ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗೇಟ್ಗಳನ್ನು ಮುಚ್ಚಿ ನೀರು ಸಂಗ್ರಹಣೆ ಆರಂಭಿಸಲಾಗಿದೆ. ಪ್ರತೀ ವರ್ಷ ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿ ಡ್ಯಾಂಲ್ಲಿ ನೀರು ಸಂಗ್ರಹಣ ಆರಂಭವಾಗುತ್ತಿದ್ದರೆ ಈ ಬಾರಿ ಅವಧಿಗಿಂತ ಮೊದಲೇ ನೀರು ಸಂಗ್ರಹಣೆ ಆರಂಭಗೊಂಡಿದೆ. ಈ ಬಾರಿ ಮಳೆಯಿಲ್ಲದೆ ಮಳೆಗಾಲದಲ್ಲಿಯೇ ನದಿ ಬರಡಾಗಿ ಮುಂದಿನ ದಿನಗಳಲ್ಲಿ ಕಾಡಬಹುದಾದ ಬರದ ಛಾಯೆ ಈಗಲೇ ಗೋಚರಿಸಿದೆ. ಜಿಲ್ಲೆಯ ಜೀವನದಿ ನೇತ್ರಾವತಿ ನದಿಯಲ್ಲೂ
ಬಂಟ್ವಾಳ: ತುಂಬೆ ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜಯಂತಿ ಕೇಶವ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಸಾಲ್ಯಾನ್ ತುಂಬೆ ಬುಧವಾರ ಅಧಿಕಾರ ಸ್ವೀಕರಿಸಿದರು. ಬಳಿಕ ಪಂಚಾಯತಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಪದಗ್ರಹಣ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಿ ಕೊಂಡರು. ಈ ಸಂದರ್ಭ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆವರೆಂಡ್ ಫಾಧರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ಬಿ.ಎ. ಗ್ರೂಫ್ನ ಸಲಾಂ ತುಂಬೆ, ನಿಕಟಪೂರ್ವಾಧ್ಯಕ್ಷ ಪ್ರವೀಣ್ ಬಿ.
ಬಂಟ್ವಾಳ: ಕಾನೂನಿನ ಅರಿವಿಲ್ಲದೆ ಮಾಡಿದ ತಪ್ಪುಗಳಿಗೆ ಶಿಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿದರು. ಅವರು ತುಂಬೆ ಗ್ರಾಮ ಪಂಚಾಯತಿ, ತಾಲೂಕು ಕಾನೂನುಗಳ ಸೇವಾ ಸಮಿತಿ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ತುಂಬೆ ಗ್ರಾಮ






















