ಕೊಕ್ಕಡ: ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳ ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆಗಳ ದಾಳಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಶ್ರಮದ ಫಲವನ್ನು ಕ್ಷಣಾರ್ಧದಲ್ಲಿ ನಾಶಮಾಡುತ್ತಿರುವ ಘಟನೆಗಳು ಅತಿಯಾಗಿ ಹೆಚ್ಚಾಗಿವೆ. ಇತ್ತೀಚಿನ ಘಟನೆಯಾಗಿ ಶನಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬಾರೆಗುಡ್ಡೆ ಪ್ರದೇಶದಲ್ಲಿ ಕುಶಾಲಪ್ಪ ಗೌಡ ಎಂಬ
ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ. ವಿಶ್ವನಾಥ್ ಇತ್ತೀಚೆಗಷ್ಟೇ
ಕನ್ನಡ ರಾಜ್ಯೋತ್ಸವ 2025ರ ಪ್ರಯುಕ್ತ ಕನ್ನಡ ಹಬ್ಬ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸಂಭ್ರಮ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪರ್ಚಾಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕನ್ನಡ ನಾಡಿನ ನೆಲ ಜಲದ ರಕ್ಷಣೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದ ಅವರು, ವ್ಯವಹಾರಿಕಾವಾಗಿ ಇತರ
ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್.
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾಗಲಿದ್ದಾರೆ. ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ – ಬೃಹತ್ ಗೀತೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ, ಅ. ೨೭ :ಕನ್ನಡದ ಖ್ಯಾತ ಕಥೆಗಾರ,ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು, ಶನಿವಾರ, ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಜರುಗಲಿರುವ ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಪ್ರಸ್ತಾಪವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯು ಸಮ್ಮತಿಸಿದೆ ಎಂದು
ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರ ಸಮಕ್ಷಮದಲ್ಲಿ
ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ ಶೆಟ್ಟಿ ತಿಳಿಸಿದ್ದಾರೆ.



























