ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಎಂದಿನಂತೆ ಹಾಸ್ಟೆಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಉಡುಪಿ ಜಿಲ್ಲೆಯ ಬಾರಕೂರು ಮೂಲದ ನಜೀರ್ (35) ಎಂಬಾತ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ವಿದ್ಯಾರ್ಥಿನಿ ಜೋರಾಗಿ ಕೂಗಿದ್ದು, ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದರು.
ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ಜಿ. ರೆಡ್ಡಿ ಅವರು ಇತ್ತೀಚಿಗೆ ಬಿಡುಗಡೆಗೊಳಿಸಿದರು. ಕೊಲ್ಕತ್ತದ ಕೇಂದ್ರ ಸಂದರ್ಭ ಗ್ರಂಥಾಲಯ ಈ ವಿಶೇಷ ಗ್ರಂಥಸೂಚಿಯನ್ನು ಪ್ರಕಟಿಸಿದೆ. ವಸ್ತು ಸಂಗ್ರಹಾಲಯ ಕುರಿತ ಜಾಗತಿಕ ಮಹಾಮೇಳ ಇಂಟರ್ನ್ಯಾಷನಲ್ ಮ್ಯೂಸಿಯಂ ಎಕ್ಷಪೊ-2023
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ, ವಿದ್ಯಾರತ್ನ ನಗರ, ಶೀಂಬ್ರ ಭಾಗಕ್ಕೆ, ಜೂನ್ 10, 15 ಮತ್ತು 20 ರಂದು ಇಂದಿರಾನಗರ ಟ್ಯಾಂಕ್,
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಾರ್ಕಳದ ಕಾರ್ತಿಕ್ (26) ಎಂದು ಗುರುತಿಸಲಾಗಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ
ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು
ಉಡುಪಿ : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7 ರ ಬುಧವಾರದಂದು, ಉಡುಪಿ ಜಿಲ್ಲೆಯ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ
ಉಡುಪಿ : ನೂತನ ರಾಜ್ಯ ಸರಕಾರ ಪುನಃ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂಡ 1 ತಿಂಗಳ ಅವಧಿಯೊಳಗೆ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿರುವುದು ಆಶ್ಚರ್ಯ ಪಡುವಂತಹ ಸಂಗತಿ. ರಾಷ್ಟ್ರೀಯತೆ, ಸಂಸ್ಕೃತಿ, ದೇಶಪ್ರೇಮ ಇವೆಲ್ಲವೂ ಪಠ್ಯ
ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ‘ಬಿಪರ್ ಜಾಯ್’ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮುಂಗಾರು ಮಳೆ ವಿಳಂಬವಾಗುವಂತಹ ಸಾಧ್ಯತೆಗಳು ಕೂಡ ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ತೀವ್ರ
ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ, ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ
ಉಡುಪಿ : ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಜಿ. ಪರಮೇಶ್ವರ್, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ಉಡುಪಿ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಚಂದ್ರಗುಪ್ತ, ಉಡುಪಿ ಎಸ್ಪಿ ಅಕ್ಷಯ್, ಎಎನ್ ಎಫ್ ಎಸ್ ಪಿ ಪ್ರಕಾಶ್ ನಿಕ್ಕಂ ನೇತೃತ್ವದದಲ್ಲಿ ಪರಿಶೀಲನಾ ಸಭೆ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಪ್ರದೇಶದಲ್ಲಿ ನಡೆಯುತ್ತಿರುವ ಘಟನೆಗಳ ಮಾಹಿತಿ ಪಡೆದಿದ್ದೇನೆ. ನೈತಿಕ ಪೊಲೀಸ್ ಗಿರಿ ಹತ್ತಿಕ್ಕುವ ಕ್ರಮದ ಬಗ್ಗೆ ಚರ್ಚೆಯಾಗಿದೆ.