ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,ಬೈಲೂರು ವಾರ್ಡಿನ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ರವರನ್ನು ನೇಮಕ ಗೊಳಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕಾತಿ ಅದೇಶ ಹೊರಡಿಸಿದ್ದು, ಪಕ್ಷ ಸಂಘಟನೆ ಬಲವರ್ಧನೆ ಕಾರ್ಯನ್ಮೋಕರಾಗಬೇಕೆಂದು ಸೂಚಿಸಿದ್ದಾರೆ. ಉಡುಪಿ
ಉಡುಪಿ: ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಕೇಂದ್ರದ ಮಾಜಿ ಸಚಿವ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಆಂಬುಲೆನ್ಸ್ ಮೂಲಕ ಉಡುಪಿಗೆ ಕರೆತರಲಾಯಿತು. ಪಾರ್ಥಿವ ಶರೀರದ ಜೊತೆಗೆ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಮಕ್ಕಳಾದ ಓಶನ್, ಒಶಾನಿ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಗೆ ಆಗಮಿಸಿದರು. ಬಳಿಕ ಉಡುಪಿಯ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ನೇತೃತ್ವದಲ್ಲಿ ಚರ್ಚ್ ಹಾಲ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.