ಮೂಡುಬಿದಿರೆ : ಪೋಲಿಯೋ ದಿನದ ಅಂಗವಾಗಿ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಶಾಲೆ ಮತ್ತು “ನಮ್ಮ ಕ್ಲಿನಿಕ್”ನಲ್ಲಿ ಐದು ವಷ೯ದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಲಾಯಿತು.ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು ಎರಡೂ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.ಕಲ್ಲಬೆಟ್ಟುವಿನ
ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಸದಸ್ಯರಾದ ದಿವೇಶ್ ಶೆಟ್ಟಿ, ಸವಿತಾ ಶೆಟ್ಟಿ, ಶಕ್ತಿ ಕೇಂದ್ರದ ಪ್ರವೀಣ್ ಶೆಟ್ಟಿ ಪಾಂಗಾಳ,
ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ ಶೀತಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ
ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ ಆರೋಪಿ. ಈತ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಷ್ಠಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ಹಣವನ್ನು ಪಡೆದು ನಕಲಿ
ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಯಾದ ಘಟನೆ ರವಿವಾರ ನಸುಕಿನ ವೇಳೆ ಕೋಟೇಶ್ವರದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಹಿಂಬದಿಯಲ್ಲಿ (ಹಳೆ ಗ್ರಾಪಂ ಕಟ್ಟಡ) ಕಳೆದ ನಾಲ್ಕೈದು ವರ್ಷಗಳಿಂದ ಎಸ್.ಎಲ್.ಆರ್.ಎಂ. ಘಟಕ ಕಾರ್ಯಾಚರಿಸುತ್ತಿದ್ದು ಇದರ ಕೆಳಭಾಗ, ಆಸುಪಾಸಿನಲ್ಲಿ ವಾಣಿಜ್ಯ ಕಟ್ಟಡಗಳಿವೆ. ಮೇಲ್ಭಾಗದಲ್ಲಿ ಒಣತ್ಯಾಜ್ಯ ಘಟಕವಿದ್ದು,
ಉಡುಪಿ: ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ,
ಉಡುಪಿ:- ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ನಾಲ್ವರು ಮಾರಣಾಂತಿಕ ಹಲ್ಲೆ ಮಾಡಿದ್ದು ಆತ ಸ್ಥಳದಲ್ಲೇ
ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಲಯನ್ಸ್ ಕ್ಲಬ್ ಎಂಜಿನಿಯರ್ಸ್ ಕುಂದಾಪುರ, ಲಯನ್ಸ್ ಕ್ಲಬ್ ಕೌನ್ ಕುಂದಾಪುರ, ನಮ್ಮಭೂಮಿ ಸಂಸ್ಥೆ ಕನ್ಯಾನ ಹಟ್ಟಿಯಂಗಡಿ, ಸ.ಮಾ.ಹಿ.ಪ್ರಾ. ಶಾಲೆ ಉಪ್ಪುಂದ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರಕಾರಿ ಆಯುಷ್
ಬೈಂದೂರು, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 6ನೇ ನೂತನ ಶಾಖೆ ವಿವಿಧ ಪೂಜಾ ವಿಧಿ ವಿಧಾನದ ಮೂಲಕ ಮರವಂತೆ ಸಮೃದ್ದಿ ಕಾಂಪ್ಲೇಕ್ಸ್‌ನಲ್ಲಿ ರವಿವಾರ ಸಂಭ್ರಮದಲ್ಲಿ ಲೋಕಾರ್ಪಣೆಗೊಂಡಿದೆ. ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರು ಭೇಟಿ ನೀಡಿ ಮಾತನಾಡಿಸಹಕಾರಿ ಕ್ಷೇತ್ರದಲ್ಲಿ ಎಸ್.ರಾಜು ಪೂಜಾರಿ ಯವರು
ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,




























