India’s trending Career Guidance Platform “Draw My Career” in association with Indian Medical Association, Mangalore is conducting a career awareness session. The event is aimed to guide students & parents of 9,10, 1st and 2nd PU students in understanding their passion and
ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ. ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಲಾರೆನ್ಸ್ ಡೇಸಾ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರ ಪತ್ನಿ ಶಿಕ್ಷಕಿ ಜೂಲಿಯಾನ ಹೆಲೆನ್ ರೆಬೆಲ್ಲೋ ಒಂದು ದಿನದ ಮುಂಚೆ ಸಾವನ್ನಪ್ಪಿದ್ದರು. ಈ ಆಘಾತದಿಂದ ಅನಾರೋಗ್ಯ
ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ
ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಲ್ಲಿ ಬಂದ ಜೀಪು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಚಾಲಕ ಪ್ರಜ್ವಲ್ ಶೆಟ್ಟಿ ಜೀಪನ್ನು ನಿಲ್ಲಿಸದೆ ಪರಾರಿಯಾಗಿದ್ದನು.ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ ೫ ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ ೫೦೦೦ ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷೀ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು. ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಉಪನ್ಯಾಸಕೇತರರು ರಕ್ತದಾನವನ್ನು ನೀಡಿದರು.
ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು.
ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ
ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು




























