ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಮಹಿಳಾ ಕಾರ್ಯಕರ್ತರಿಗೆ ಲೋಕಸಭಾ ಚುನಾವಣಾ ಕಾರ್ಯಗಾರ ಇಂದು ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಗಾರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ರವರು ಮಹಿಳಾ ಕಾರ್ಯಕರ್ತರು ಹೇಗೆ ಚುನಾವಣೆಯಲ್ಲಿ ತಮ್ಮ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯಗಾರ ನೆರವೇರಿಸಿದರು. ವೇದಿಕೆಯಲ್ಲಿ ಕರ್ನಾಟಕದ ಆರು ಲೋಕಸಭಾ ಕ್ಷೇತ್ರದ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಒಟ್ಟು 8.81ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3.50ಲಕ್ಷ ರೂ., ಕಾಪು ವಿಧಾನಸಭಾ ಕ್ಷೇಕತ್ರದ ಉದ್ಯಾವರ ಚೆಕ್‌ಪೋಸ್ಟ್‌ನಲ್ಲಿ 4.51ಲಕ್ಷ ರೂ. ಹಾಗೂ ಮಾ.23ರಂದು ಉಡುಪಿ
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆದ್ದಿದ್ದರು. ಈಗ ಜಯಪ್ರಕಾಶ್ ಹೆಗ್ಡೆ ಅವರ ಜೊತೆಗೆ ಸದಾನಂದ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ
ಉಡುಪಿ: ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದ್ದು,ಹೊಸ ಮಾರಿಗುಡಿಗೆ ಮಂಗಳವಾರದಂದು ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜ್ ಶೇಖರ್ ಕೋಟ್ಯಾನ್ ರವರು ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮ ಸಮಾಜಕ್ಕೆ ಮೀಸಲಿಟ್ಟ ಒಂದು ಕೋಟಿ ವೆಚ್ಚದ ಬೃಹತ್ ಶಿಲಾ ಸ್ತಂಭದ ವೆಚ್ಚವನ್ನು ತಮ್ಮ ಸಮಾಜ ಬಾಂಧವರಿಂದಲೇ ಭರಿಸಿ ಶೀಘ್ರದಲ್ಲೇ ನೀಡುವುದಾಗಿ




























