Home Posts tagged #udupi (Page 33)

ಸೀತಾನದಿಯಲ್ಲಿ ಕಳೆದುಹೋಗಿದ್ದ ಚಿನ್ನದ ಸರ ಹುಡುಕಿಕೊಟ್ಟ ಈಶ್ವರ್ ಮಲ್ಪೆ

ಉಡುಪಿ ಜಿಲ್ಲೆಯ ಪರ್ಕಳದ ಪೆರ್ಣಂಕಿಲ ಸಮೀಪದಲ್ಲಿರುವ ಸೀತಾನದಿಯಲ್ಲಿ ಎರಡು ದಿನದ ಹಿಂದೆ ಈಜಲು ಹೋಗಿದ್ದ ಮಲ್ಪೆಯ ಕೊಪ್ಪಲತೋಟ ನಿವಾಸಿ ಕಿಶನ್ ಕೋಟ್ಯಾನ್ ಎಂಬ ಯುವಕ ತನ್ನ ಕತ್ತಿನಲ್ಲಿದ್ದ ಮೂರು ಲಕ್ಷ ಮೌಲ್ಯದ ಬೆಲೆಬಾಳುವ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆ ನಂತರ ನುರಿತ ಈಜುಪಟುಗಳಿಂದ ಹುಡುಕಾಟ ನಡೆಸಿಯೂ ಆ ಚಿನ್ನದ ಸರ ಸಿಕ್ಕಿರಲಿಲ್ಲ. ಈ ಘಟನೆ ನಡೆದು

ಕುಂದಾಪುರ: ತಹಶೀಲ್ದಾರ್  ಶೋಭಾ ಲಕ್ಷ್ಮೀ,  ರಾಜ್ಯಸ್ವ ಅಧಿಕಾರಿ ರಾಘವೇಂದ್ರ, ವಿಎ ಚಂದ್ರಶೇಖರ್ ಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ಮೊದಲೇ ನೋಟಿಸ್ ದಿನಾಂಕ 24.08.2020ರಲ್ಲಿ ಶ್ರೀಧರ್ ಶೆಟ್ಟಿಯವರ ಪತ್ನಿ ಗುಲಾಬಿ ಶೆಡ್ತಿಯವರಿಗೆ

ಪಡುಬಿದ್ರಿ: ಆದ್ಯಾ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ

ನಿರಂತರ ಸಮಜೋಮುಖಿ ಕಾರ್ಯಗಳನ್ನೇ ತನ್ನ ಉಸಿರಾಗಿಸಿಕೊಂಡ ಪಡುಬಿದ್ರಿಯ ಆದ್ಯಾ ಫೌಂಡೇಷನ್ ವತಿಯಿಂದ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಪಡುಬಿದ್ರಿ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಸರಳ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ಮುಕ್ತೇಸರರಾದ ಜೀತೇಂದ್ರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಉದ್ಯೋಗ ಆಕಾಂಕ್ಷೀ ಗಳಿಗಾಗಿ ರಾಕೇಶ್ ಅಜಿಲ ಸಾರಥ್ಯದ ಆದ್ಯಾ

ಉಡುಪಿ: ಪ್ರೇತ ಆಹ್ವಾನೆಗೆ ಬೆಚ್ಚಿ ಬಿದ್ದ ಕಾರ್ಮಿಕರು..!

ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತಿದೆ. ಮೀನು ಕಟ್ಟಿಂಗ್ ಶೆಡ್‍ನಲ್ಲಿ ಉತ್ತರ ಭಾರತದ 10 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಲ್ಲರೂ ಒಂದೇ ರೂಮಿನಲ್ಲಿ ನೆಲೆಸಿದ್ದರು. ಆದರೆ, ತಡರಾತ್ರಿ

ಉಡುಪಿ: ಎಸ್‍ಬಿಐ ಎಂಡಿ ಆಗಿ ವಿನಯ್ ಎಂ. ತೋನ್ಸೆ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ವಿನಯ್ ಎಂ. ತೋನ್ಸೆಯವರು ಎಸ್‍ಬಿಐ- ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾದ ಎಂಡಿ- ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅವರು ಉಪ ಎಂಡಿ ಆಗಿ ಇಲ್ಲಿಯ ತನಕ ಕಾರ್ಯ ನಿರ್ವಹಿಸಿದವರು. ಉಡುಪಿ ಜಿಲ್ಲೆಯಿಂದ ಈ ಹುದ್ದೆಗೇರಿದ ಮೊದಲಿಗರು ಇವರು. ವರನಟ ರಾಜಕುಮಾರ್ ಅಭಿಮಾನಿ ಹಾಗೂ ಪೂರ್ಣಚಂದ್ರ ತೇಜಸ್ವಿ ಮೊದಲಾದ ಸಾಹಿತಿಗಳ ಸಾಹಿತ್ಯಾಭಿಮಾನಿ ಆದ ವಿನಯ್ ಎಂ. ತೋನ್ಸೆ ಅಪ್ಪಟ ಕನ್ನಡ, ತುಳು

ಉಡುಪಿ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ

ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ..!

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ. ಉಡುಪಿ ಮೂಲದ ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಅವರ ಸಹೋದರಿ ಸುಮಾ ಪಂಜಿಮಾರ್ ತಮ್ಮ ಪೇಟಿಂಗ್ ಮೂಲಕ ಸಾಧನೆ ಮಾಡುತ್ತಿದ್ದು, ಇತರರಿಗೆ ಪ್ರೇರಣೆ ನೀಡುತ್ತಿದ್ದಾರೆ. ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಸುಮಾ ಪಂಜಿಮಾರ್ ಇಬ್ಬರು ಮೂಳೆಗಳನ್ನು

ಕುಂದಾಪುರ: ನವಜಾತ ಶಿಶು ಸಾವಿನ ಪ್ರಕರಣ: ಜಿಲ್ಲಾಧಿಕಾರಿ ಭರವಸೆ ಬಳಿಕ ಅಹೋರಾತ್ರಿ ಧರಣಿ ತಾತ್ಕಾಲಿಕ ಅಂತ್ಯ

ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ನವಜಾತ ಶಿಶು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ವೈದ್ಯರ ನಿರ್ಲಕ್ಷದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಸೋಮವಾರ ಸಂಜೆ ಆಸ್ಪತ್ರೆ ಎದುರು ಜಮಾಯಿಸಿದ ಪೋಷಕರು ಹಾಗೂ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಡಿಎಚ್‍ಓ, ಡಿಸಿ ಬಾರದೇ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರ ಜೊತೆ

ಉಡುಪಿ : ಹತ್ಯೆ ಪ್ರಕರಣ – ಕೊಲೆಗೆ ಬಳಸಿದ ಚೂರಿ ಪತ್ತೆಗೆ ಪೊಲೀಸರಿಂದ ತೀವ್ರ ಶೋಧ

ನೇಜಾರು ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ(39) ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‍ಗಳನ್ನು ಬಳಸಿದ್ದನು. ಅದೇ ರೀತಿ ಬ್ಯಾಗ್ ಮತ್ತು

ಬೈಂದೂರು: ಕಿರಿಮಂಜೇಶ್ವರದಲ್ಲಿ ಹಾಲು ಸಂಗ್ರಹಣಾ ವಾಹನದ ಉದ್ಘಾಟನೆ

ಬೈಂದೂರಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಿತು. ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು. ಮಹಿಳೆಯರು ಸಮವಸ್ತ್ರ ಧರಿಸಿದ್ದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು